ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ

|

Updated on: Jan 08, 2025 | 7:15 PM

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಸಾರ್ವಜನಿಕರ ಜಯಘೋಷಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೊಂದಿಗೆ ರೋಡ್ ಶೋ ನಡೆಸಿದರು. ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಆಂಧ್ರದ ಗವರ್ನರ್ ಸೈಯದ್ ಅಬ್ದುಲ್ ನಜೀರ್, ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಬಿಜೆಪಿ ಮುಖಂಡರು ಪ್ರಧಾನಿಯವರನ್ನು ಅಭಿನಂದಿಸಿದರು.

ವಿಶಾಖಪಟ್ಟಣ: ಆಂಧ್ರಪ್ರದೇಶಕ್ಕೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿಶಾಖಪಟ್ಟಣದ ಸಂಪತ್ ವಿನಾಯಕ ದೇವಸ್ಥಾನದಿಂದ ಆಂಧ್ರ ವಿಶ್ವವಿದ್ಯಾಲಯ ಎಂಜಿನಿಯರಿಂಗ್ ಕಾಲೇಜು ಮೈದಾನದವರೆಗೆ ನಡೆದ ರೋಡ್‌ಶೋನಲ್ಲಿ ಭಾಗವಹಿಸಿದರು. ಈ ವೇಳೆ ಅವರೊಂದಿಗೆ ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಕೂಡ ರೋಡ್​ಶೋನಲ್ಲಿ ಪಾಲ್ಗೊಂಡರು.

ಆಂಧ್ರಪ್ರದೇಶಕ್ಕೆ ಪ್ರಧಾನಿಯನ್ನು ಸ್ವಾಗತಿಸಿದ ಸಿಎಂ ಚಂದ್ರಬಾಬು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಹಿರಿಯ ಅಧಿಕಾರಿಗಳು ವೈಜಾಗ್ ವಿಮಾನ ನಿಲ್ದಾಣದಲ್ಲಿ ಅವರನ್ನು ಬರಮಾಡಿಕೊಂಡರು. 2024ರಲ್ಲಿ ಸತತ ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ನರೇಂದ್ರ ಮೋದಿ ಆಂಧ್ರಪ್ರದೇಶಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 08, 2025 07:12 PM