ಅಹಮದಾಬಾದ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಜನರಿಂದ ಅದ್ದೂರಿ ಸ್ವಾಗತ

Updated on: Aug 25, 2025 | 7:16 PM

ಗುಜರಾತ್​​ನ ಅಹಮದಾಬಾದ್​​ನಲ್ಲಿ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ. ಇದಾದ ಬಳಿಕ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನಲ್ಲಿ ಭವ್ಯ ರೋಡ್ ಶೋ ನಡೆಸಿದರು. ಬಳಿಕ ಖೋಡಲ್‌ಧಾಮ್ ಮೈದಾನದಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಲೋಕಾರ್ಪಣೆ ಮಾಡಲಿದ್ದಾರೆ.

ಅಹಮದಾಬಾದ್, ಆಗಸ್ಟ್ 25: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಸೋಮವಾರ) ಅಹಮದಾಬಾದ್‌ನಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಮಾರ್ಗದುದ್ದಕ್ಕೂ ಜನರು ಅವರಿಗೆ ಅದ್ದೂರಿ ಸ್ವಾಗತ ನೀಡಿದರು. ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ (PM Modi Roadshow) ಅವರನ್ನು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಗುಜರಾತ್‌ನ ಸಂಸದ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಸ್ವಾಗತಿಸಿದರು. ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ನರೋಡಾ ಪ್ರದೇಶವನ್ನು ತಲುಪಿದರು. ನಂತರ ನಗರದ ನಿಕೋಲ್ ಪ್ರದೇಶದ ಹರಿದರ್ಶನ್ ಕ್ರಾಸ್‌ರೋಡ್‌ನಿಂದ 2 ಕಿ.ಮೀ. ಉದ್ದದ ರೋಡ್ ಶೋ ನಡೆಸಿದರು. ರೋಡ್‌ಶೋ ಮಾರ್ಗದ ಎರಡೂ ಬದಿಗಳಲ್ಲಿ ಸಾವಿರಾರು ಜನರು ಸಾಲುಗಟ್ಟಿ ನಿಂತು ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ