PM Modi in Bangalore Live: ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ; ನೇರ ಪ್ರಸಾರ ಇಲ್ಲಿದೆ
ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ: ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಎಲ್ಲ ರಸ್ತೆಗಳಲ್ಲೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿದ್ದು, ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾ ಸಂಭ್ರಮಿಸುತ್ತಿರುವ ದೃಶ್ಯ ಕಂಡುಬಂದಿತು.
ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರನ್ನು ರಾಜ್ಯಪಾಲ ತ್ಯಾವರ್ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸೇರಿದಂತೆ ಹಲವರು ಬರಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ. ಎಲ್ಲ ರಸ್ತೆಗಳಲ್ಲೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿದ್ದು, ರಸ್ತೆಯ ಅಕ್ಕಪಕ್ಕದಲ್ಲಿ ಬಿಜೆಪಿ ಚಿಹ್ನೆಯಿರುವ ಕ್ಯಾಪ್ಗಳನ್ನು ತೊಟ್ಟು ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾ ಸಂಭ್ರಮಿಸುತ್ತಿರುವ ದೃಶ್ಯ ಕಂಡುಬಂದಿತು. ಬೆಂಗಳೂರಿನಲ್ಲಿ ಮೋದಿ ಮೇನಿಯಾ ಹೇಗಿದೆ ಎಂಬುದರ ನೇರ ಪ್ರಸಾರ ಇಲ್ಲಿದೆ…