ಚುನಾವಣೆಗೆ ಸಜ್ಜಾದ ಜಾರ್ಖಂಡ್​ನಲ್ಲಿ ಪ್ರಧಾನಿ ಮೊದಲ ರ್ಯಾಲಿ; ಮೋದಿ ನೋಡಲು ಜನಸಾಗರ

|

Updated on: Nov 04, 2024 | 8:26 PM

ಜಾರ್ಖಂಡ್​ನಲ್ಲಿ ಬಿಜೆಪಿ ಗೆಲುವು ಸಾಧಿಸಲು ಬುಡಕಟ್ಟು ಸಮುದಾಯದ ಮತಗಳು ನಿರ್ಣಾಯಕವಾಗಿವೆ. 2011ರ ಜನಗಣತಿಯ ಪ್ರಕಾರ ಜಾರ್ಖಂಡ್‌ನ ಜನಸಂಖ್ಯೆಯ ಕಾಲು ಭಾಗದಷ್ಟು ಬುಡಕಟ್ಟು ಜನಾಂಗದವರು ಇದ್ದಾರೆ ಮತ್ತು ರಾಜ್ಯದ 24 ಜಿಲ್ಲೆಗಳಲ್ಲಿ 21ರಲ್ಲಿ ಕನಿಷ್ಠ 1 ಲಕ್ಷದಷ್ಟು ಬುಡಕಟ್ಟು ಜನಾಂಗದವರಿದ್ದಾರೆ. ರಾಜ್ಯದ 81 ಅಸೆಂಬ್ಲಿ ಸ್ಥಾನಗಳಲ್ಲಿ (ಜೊತೆಗೆ 1 ನಾಮನಿರ್ದೇಶಿತ) 28 ಎಸ್‌ಟಿಗಳಿಗೆ ಮೀಸಲಾಗಿದೆ.

ರಾಂಚಿ: ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಜಾರ್ಖಂಡ್‌ನಲ್ಲಿ ನಡೆದ ತಮ್ಮ ಮೊದಲ ಚುನಾವಣಾ ರ್ಯಾಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಮೋದಿಯವರನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಸೇರಿತ್ತು. ಮೋದಿಯವರ ಇಂದಿನ ಜಾರ್ಖಂಡ್ ಪ್ರವಾಸದ ಹೈಲೈಟ್ಸ್​ ಇಲ್ಲಿದೆ. ಜಾರ್ಖಂಡ್​ನಲ್ಲಿ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಜಾರ್ಖಂಡ್ ರಾಜ್ಯದ 81 ವಿಧಾನಸಭಾ ಸ್ಥಾನಗಳಲ್ಲಿ 68ರಲ್ಲಿ ಸ್ಪರ್ಧಿಸುತ್ತಿದೆ. ಉಳಿದವುಗಳನ್ನು ತನ್ನ ಮಿತ್ರಪಕ್ಷಗಳಿಗೆ ಬಿಟ್ಟುಕೊಟ್ಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ