ನವಿ ಮುಂಬೈನಲ್ಲಿ ಏಷ್ಯಾದ 2ನೇ ಅತಿದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ
ಭಾರತದ ಶ್ರೀಮಂತ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಆಚರಿಸುವ ನಿಟ್ಟಿನಲ್ಲಿ ನವಿ ಮುಂಬೈನಲ್ಲಿ ಶ್ರೀ ಶ್ರೀ ರಾಧಾ ಮದನಮೋಹನ್ಜಿ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ವಿಶಿಷ್ಟ ವಿನ್ಯಾಸ ಮತ್ತು ಭಕ್ತಿಯ ವಾತಾವರಣವನ್ನು ಹೊಂದಿರುವ ಈ ದೇವಾಲಯವು ಭಾರತದ ಒಂದು ಪ್ರಮುಖ ಹೆಗ್ಗುರುತಾಗಲಿದೆ. 9 ಎಕರೆ ವಿಸ್ತೀರ್ಣದ ಈ ಕಾಂಪ್ಲೆಕ್ಸ್ ಹಲವಾರು ದೇವತೆಗಳನ್ನು ಹೊಂದಿರುವ ದೇವಾಲಯ, ವೇದ ಶಿಕ್ಷಣ ಕೇಂದ್ರ, ಪ್ರಸ್ತಾವಿತ ವಸ್ತುಸಂಗ್ರಹಾಲಯಗಳು ಮತ್ತು ಸಭಾಂಗಣ ಮತ್ತು ಗುಣಪಡಿಸುವ ಕೇಂದ್ರವನ್ನು ಹೊಂದಿದೆ.
ನವಿ ಮುಂಬೈ: ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಇಸ್ಕಾನ್ ಕಾಂಪ್ಲೆಕ್ಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. 9 ಎಕರೆ ವಿಸ್ತೀರ್ಣದ ಮತ್ತು ವೇದ ಶಿಕ್ಷಣ ಕೇಂದ್ರ, ಸಭಾಂಗಣವನ್ನು ಒಳಗೊಂಡಿರುವ ಇಸ್ಕಾನ್ ದೇವಾಲಯದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು. ಖಾರ್ಘರ್‌ನಲ್ಲಿ ಇಸ್ಕಾನ್ ಸ್ಥಾಪಿಸಿದ ಶ್ರೀ ಶ್ರೀ ರಾಧಾ ಮೋಹನ್ ದೇವಾಲಯವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಈ ದೇವಾಲಯವು ಯುವ ಪೀಳಿಗೆಯನ್ನು ಆಕರ್ಷಿಸಲು, ಈ ಸಂಕೀರ್ಣವು ಮಹಾಭಾರತ ಮತ್ತು ರಾಮಾಯಣ ಮಹಾಕಾವ್ಯಗಳನ್ನು ಆಧರಿಸಿದ ವಸ್ತುಸಂಗ್ರಹಾಲಯವನ್ನು ಒಳಗೊಂಡಿದೆ. ಇಲ್ಲಿ ವೃಂದಾವನದ 12 ಕಾಡುಗಳಿಂದ ಪ್ರೇರಿತವಾದ ಉದ್ಯಾನವನ್ನು ಅಭಿವೃದ್ಧಿಪಡಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos