ಪಾಟ್ನಾ ವಿಮಾನ ನಿಲ್ದಾಣದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದ ಜಯ ಪ್ರಕಾಶ್ ನಾರಾಯಣ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪ್ರಯಾಣಿಕರ ಟರ್ಮಿನಲ್ ಅನ್ನು 1,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಿಂದ ಎರಡು ದಿನಗಳ ಭೇಟಿಗೆ ಬಿಹಾರ ರಾಜ್ಯಕ್ಕೆ ಆಗಮಿಸಿದ ನಂತರ ಪಾಟ್ನಾ ವಿಮಾನ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಈ ಯೋಜನೆಗಳನ್ನು ಅನಾವರಣಗೊಳಿಸಿದರು. ಮೇ 30ರಂದು ಪ್ರಧಾನ ಮಂತ್ರಿ ಅವರು ಕರಕಟ್‌ಗೆ ಭೇಟಿ ನೀಡುವ ಸಂದರ್ಭದಲ್ಲಿ 48,520 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಭೇಟಿಗಾಗಿ ಪಶ್ಚಿಮ ಬಂಗಾಳದಿಂದ ಪಾಟ್ನಾಕ್ಕೆ ಆಗಮಿಸಿದ್ದಾರೆ.
ಪಾಟ್ನಾ, ಮೇ 29: ಪ್ರಧಾನಿ ನರೇಂದ್ರ ಮೋದಿ ಇಂದು ಬಿಹಾರದ ಪಾಟ್ನಾ ವಿಮಾನ ನಿಲ್ದಾಣದ (Patna Airport) ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದ್ದಾರೆ. ಪಾಟ್ನಾ ನಗರದ ಹೊರವಲಯದಲ್ಲಿರುವ ಬಿಹ್ತಾ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ಗೆ ಅಡಿಪಾಯ ಹಾಕಿದರು. ಪಾಟ್ನಾದ ಜಯ ಪ್ರಕಾಶ್ ನಾರಾಯಣ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪ್ರಯಾಣಿಕರ ಟರ್ಮಿನಲ್ ಅನ್ನು 1,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಿಂದ ಎರಡು ದಿನಗಳ ಭೇಟಿಗೆ ಬಿಹಾರ ರಾಜ್ಯಕ್ಕೆ ಆಗಮಿಸಿದ ನಂತರ ಪಾಟ್ನಾ ವಿಮಾನ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಈ ಯೋಜನೆಗಳನ್ನು ಅನಾವರಣಗೊಳಿಸಿದರು. ಈ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪಾಟ್ನಾ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ 65,150 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, ಪೀಕ್ ಅವರ್‌ನಲ್ಲಿ 3,000 ಪ್ರಯಾಣಿಕರಿಗೆ ಮತ್ತು ವಾರ್ಷಿಕವಾಗಿ 1 ಕೋಟಿ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ವಿಶ್ವ ದರ್ಜೆಯ ಸೌಲಭ್ಯಗಳನ್ನು ಹೊಂದಿದೆ. ಈ ಟರ್ಮಿನಲ್ ಅನ್ನು ಸುಮಾರು 1,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ವಾರ್ಷಿಕವಾಗಿ 1 ಕೋಟಿ ಪ್ರಯಾಣಿಕರನ್ನು ನಿರ್ವಹಿಸುತ್ತದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

