AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ವಿಶ್ವದ ಮೊದಲ ಟಿಲ್ಟೆಡ್ ಎಲ್​ಇಡಿ ತಾರಾಲಯ 'ಕಾಸ್ಮೋಸ್' ಉದ್ಘಾಟಿಸಿದ ಪ್ರಧಾನಿ  ಮೋದಿ

ಮೈಸೂರಿನಲ್ಲಿ ವಿಶ್ವದ ಮೊದಲ ಟಿಲ್ಟೆಡ್ ಎಲ್​ಇಡಿ ತಾರಾಲಯ ‘ಕಾಸ್ಮೋಸ್’ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಸನ್ನ ಹೆಗಡೆ
|

Updated on:Nov 13, 2026 | 3:48 PM

Share

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ 115 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ 'ಕಾಸ್ಮೋಸ್' (COSMOS) ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. 115 ಕೋಟಿ ರೂಪಾಯಿ ವೆಚ್ಚದಲ್ಲಿ ಮೈಸೂರು ವಿವಿಯಿಂದ ಜಯಚಾಮರಾಜ ಒಡೆಯರ್ ಉನ್ನತ ಕಲಿಕಾ ಕೇಂದ್ರದ ಆವರಣದ 3.5 ಎಕರೆ ಪ್ರದೇಶದಲ್ಲಿ ಇದನ್ನು ನಿರ್ಮಿಸಲಾಗಿದೆ.

ಮೈಸೂರು, ನವೆಂಬರ್​​ 13: ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗಿರುವ ವಿಶ್ವದ ಮೊದಲ ಟಿಲ್ಟೆಡ್ ಎಲ್​ಇಡಿ ತಾರಾಲಯ ‘ಕಾಸ್ಮೋಸ್’ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. 15 ಡಿಗ್ರಿ ಓರೆಯಾದ LED ಡೋಮ್ ಪ್ಲಾನಿಟೋರಿಯಂ ಇದಾಗಿದ್ದು, ಮೈಸೂರು ವಿವಿಯ ಜಯಚಾಮರಾಜ ಒಡೆಯರ್ ಉನ್ನತ ಕಲಿಕಾ ಕೇಂದ್ರದ ಆವರಣದ 3.5 ಎಕರೆ ಪ್ರದೇಶದಲ್ಲಿ ತಾರಾಲಯ ನಿರ್ಮಾಣ ಮಾಡಲಾಗಿದೆ. ಈ ತಾರಾಲಯವನ್ನು 115 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ರಾಜ್ಯಪಾಲೆ ಡಾ.ಸುಧಾ ಯಾದವ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​​, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಜರೆಡ್ಡಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ನೇರಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Nov 13, 2026 03:45 PM

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More