Narendra Modi: ಆರ್ಗಾನಿಕ್ ಕೃಷಿಗೆ ಆದ್ಯತೆ ನೀಡಿ; ರೈತರು, ವಿಜ್ಞಾನಿಗಳ ಜೊತೆ ಪ್ರಧಾನಿ ಮೋದಿ ಸಂವಾದ

|

Updated on: Aug 11, 2024 | 3:13 PM

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 109 ಹೆಚ್ಚು ಇಳುವರಿ ನೀಡುವ, ಹವಾಮಾನ-ನಿರೋಧಕ ಮತ್ತು ಜೈವಿಕ ಬಲವರ್ಧಿತ ಬೆಳೆಗಳನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೈತರು ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 109 ಅಧಿಕ ಇಳುವರಿ ನೀಡುವ, ಜೈವಿಕ ಬಲವರ್ಧಿತ ಬೆಳೆಗಳ ಬೀಜಗಳನ್ನು ಬಿಡುಗಡೆಗೊಳಿಸಿದರು. ಈ ವೇಳೆ ಅವರು ರೈತರು ಮತ್ತು ವಿಜ್ಞಾನಿಗಳ ಜೊತೆ ಸಂವಾದ ನಡೆಸಿದರು. ಸಂವಾದದ ವೇಳೆ ಕೃಷಿ ಕ್ಷೇತ್ರವನ್ನು ಮೌಲ್ಯವರ್ಧಿತಗೊಳಿಸುವ ವಿಧಾನದ ಬಗ್ಗೆ ಅವರು ಚರ್ಚಿಸಿದರು. ಇಂದು ಬಿಡುಗಡೆಯಾದ ಬೀಜಗಳು ತಮಗೆ ಬಹಳ ಅನುಕೂಲಕರವಾಗಲಿದೆ ಎಂದು ಹೇಳಿದ ರೈತರು ಇದು ಖರ್ಚನ್ನು ಕಡಿಮೆ ಮಾಡುವಷ್ಟೇ ಅಲ್ಲದೆ ಪರಿಸರಕ್ಕೂ ಅನುಕೂಲಕರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಆರ್ಗಾನಿಕ್ ಕೃಷಿಯ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ತಾವು ನೈಸರ್ಗಿಕ ಕೃಷಿ ಉತ್ಪನ್ನಗಳನ್ನೇ ದಿನವೂ ಬಳಸುವುತ್ತಿದ್ದೇನೆ ಎಂದು ಹೇಳಿದರು. ಹಾಗೇ, ಸಿರಿಧಾನ್ಯಗಳ ಬಳಕೆ ಹೆಚ್ಚಾಗಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಪ್ರಧಾನಿ ಬಿಡುಗಡೆ ಮಾಡಿದ 61 ಬೆಳೆಗಳ 109 ವಿಧಗಳಲ್ಲಿ 34 ಕ್ಷೇತ್ರ ಬೆಳೆಗಳು ಮತ್ತು 27 ತೋಟಗಾರಿಕಾ ಬೆಳೆಗಳು ಸೇರಿವೆ. ಕ್ಷೇತ್ರ ಬೆಳೆಗಳಲ್ಲಿ ರಾಗಿ, ಮೇವು ಬೆಳೆಗಳು, ಎಣ್ಣೆಕಾಳುಗಳು, ದ್ವಿದಳ ಧಾನ್ಯಗಳು, ಕಬ್ಬು, ಹತ್ತಿ, ನಾರು ಮತ್ತು ಇತರ ಬೆಳೆಗಳು ಸೇರಿದಂತೆ ವಿವಿಧ ಧಾನ್ಯಗಳ ಬೀಜಗಳನ್ನು ಬಿಡುಗಡೆ ಮಾಡಲಾಯಿತು. ತೋಟಗಾರಿಕಾ ಬೆಳೆಗಳ ಪೈಕಿ ವಿವಿಧ ಬಗೆಯ ಹಣ್ಣುಗಳು, ತರಕಾರಿ ಬೆಳೆಗಳು, ತೋಟದ ಬೆಳೆಗಳು, ಗಡ್ಡೆ ಬೆಳೆಗಳು, ಸಾಂಬಾರು ಪದಾರ್ಥಗಳು, ಹೂವುಗಳು ಮತ್ತು ಔಷಧೀಯ ಬೆಳೆಗಳನ್ನು ಬಿಡುಗಡೆ ಮಾಡಲಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ