ಕತ್ರಾ-ಶ್ರೀನಗರ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ ಮೋದಿ
ಜಮ್ಮು ಮತ್ತು ಕಾಶ್ಮೀರ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚೆನಾಬ್ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದರು. ಈ ವೇಳೆ 46,000 ಕೋಟಿ ರೂ. ಮೌಲ್ಯದ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಈ ವೇಳೆ ಕತ್ರಾ-ಶ್ರೀನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಶ್ರೀನಗರ, ಜೂನ್ 6: ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸದಾಗಿ ಉದ್ಘಾಟಿಸಲಾದ ಕತ್ರಾ-ಶ್ರೀನಗರ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿನಲ್ಲಿ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಜಮ್ಮು-ಕಾಶ್ಮೀರಕ್ಕೆ ತಮ್ಮ ಮೊದಲ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು 46,000 ಕೋಟಿ ರೂ. ಮೌಲ್ಯದ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಕತ್ರಾದಲ್ಲಿ ಉದ್ಘಾಟಿಸಿದರು. ಇದರ ಬಳಿಕ ಮೋದಿ ಚೆನಾಬ್ ಸೇತುವೆ ಮತ್ತು ಅಂಜಿ ಸೇತುವೆಯನ್ನು ಉದ್ಘಾಟಿಸಿದರು. ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಉದ್ಘಾಟನೆ ಮತ್ತು ಸಮರ್ಪಿತ ಯೋಜನೆಗಳಿಗೆ ಅಡಿಪಾಯ ಹಾಕಿದರು. ಕತ್ರಾದಿಂದ ಶ್ರೀನಗರಕ್ಕೆ ಚಲಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಹತ್ತಿದ ಪ್ರಧಾನಿ ಮೋದಿ ರೈಲಿನಲ್ಲಿ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ