PM Narendra Modi Karnataka Visit: ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಬಂದಳಿದ ನಂತರ ಚಾಪರ್ ನಲ್ಲಿ ಮಾದಾವರ ಬಿಈಐಸಿ ಗೆ ತೆರಳಿದ ಮೋದಿ

PM Narendra Modi Karnataka Visit: ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಬಂದಳಿದ ನಂತರ ಚಾಪರ್ ನಲ್ಲಿ ಮಾದಾವರ ಬಿಈಐಸಿ ಗೆ ತೆರಳಿದ ಮೋದಿ

ಅರುಣ್​ ಕುಮಾರ್​ ಬೆಳ್ಳಿ
|

Updated on:Feb 06, 2023 | 12:29 PM

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಮೇಲಿಂದ ಮೇಲೆ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡುತ್ತಿರುವುದು ಕಾಂಗ್ರೆಸ್ ಪಾಳೆಯದಲ್ಲಿ ಆತಂಕ ಮೂಡಿಸುತ್ತಿರುವುದು ಮಾತ್ರ ಸುಳ್ಳಲ್ಲ.

ಬೆಂಗಳೂರು:  ಕೇವಲ ಒಂದು ತಿಂಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಮೂರನೇ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದಾರೆ. ಇನ್ನು ಮೂರು ತಿಂಗಳ ಅವಧಿಯಲ್ಲಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿವೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ (Amit Shah) ಅವರು ಮೇಲಿಂದ ಮೇಲೆ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡುತ್ತಿರುವುದು ಕಾಂಗ್ರೆಸ್ ಪಾಳೆಯದಲ್ಲಿ ಆತಂಕ ಮೂಡಿಸುತ್ತಿರುವುದು ಮಾತ್ರ ಸುಳ್ಳಲ್ಲ. ಇಂದು ಬೆಳಗ್ಗೆ ವಿಶೇಷ ವಿಮಾನದ ಮೂಲಕ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ ಅವರು ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಬೆಂಗಳೂರಿನಿಂದ ಕೆಲವೇ ಕಿಮೀಗಳಷ್ಟು ದೂರದ ಮಾದಾವರಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರಕ್ಕೆ (Bengaluru International Exhibition Centre) ತೆರಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 06, 2023 12:26 PM