ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್ ನಲ್ಲಿ ಚಿಕ್ಕಬಳ್ಳಾಪುರ ಬಳಿಯ ಹೆಲಿಪ್ಯಾಡ್ ನಲ್ಲಿ ಬಂದಿಳಿದ ಪ್ರಧಾನಿ ಮೋದಿ
ಅಗಲಗುರ್ಕಿಯಲ್ಲಿ ನಿರ್ಮಿಸಲಾಗಿರುವ ಭವ್ಯ ಮತ್ತು ಬೃಹತ್ ವೇದಿಕೆಯಿಂದ ಪ್ರಧಾನಿ ಮೋದಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದ ಜನರನ್ನು ಉದ್ದೇಶಿಸಿ ಮಾತಾಡಲಿದ್ದಾರೆ. ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಮತ್ತು ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಅವರ ಪರವಾಗಿ ಪ್ರಧಾನಿ ಮೋದಿ ಮತ ಯಾಚಿಸಲಿದ್ದಾರೆ.
ಚಿಕ್ಕಬಳ್ಳಾಪುರ: ನಿಗದಿಯಾಗಿದ್ದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯರು (PM Narendra Modi) ಮಧ್ಯಾಹ್ನ ಸುಮಾರು 3.15 ಗಂಟೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿ ಅಗಲಗುರ್ಕಿ ಏರ್ಪಡಿಸಿರುವ ಬೃಹತ್ ಬಿಜೆಪಿ-ಜೆಡಿಎಸf ಸಮಾವೇಶದಲ್ಲಿ (BJP JDS convention) ಭಾಗವಹಿಸಲು ಅಗಮಿಸಿದರು. ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಭಾರತೀಯ ವಾಯುಸೇನೆಯ (Indian Air Force) ಹೆಲಿಕಾಪ್ಟರ್ ನಿಂದ ಹೊರಟ ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್ ನಲ್ಲಿ ಲ್ಯಾಂಡ್ ಅಗುವುದನ್ನು ದೃಶ್ಯಗಳಲ್ಲಿ ನೋಡಬಹುದು. ಅವರನ್ನು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಬರಮಾಡಿಕೊಂಡರು. ಅಗಲಗುರ್ಕಿಯಲ್ಲಿ ನಿರ್ಮಿಸಲಾಗಿರುವ ಭವ್ಯ ಮತ್ತು ಬೃಹತ್ ವೇದಿಕೆಯಿಂದ ಪ್ರಧಾನಿ ಮೋದಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದ ಜನರನ್ನು ಉದ್ದೇಶಿಸಿ ಮಾತಾಡಲಿದ್ದಾರೆ. ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಮತ್ತು ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಅವರ ಪರವಾಗಿ ಪ್ರಧಾನಿ ಮೋದಿ ಮತ ಯಾಚಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮಾಜಿ ಡಿಸಿಎಂ ಡಾ ಅಶ್ವತ್ಥ್ ನಾರಾಯಣ, ಶಾಸಕ ಎಸ್ ಆರ್ ವಿಶ್ವನಾಥ್ ಅಭ್ಯರ್ಥಿಗಳಾದ ಡಾ ಸುಧಾಕರ್, ಮಲ್ಲೇಶ್ ಬಾಬು ಸೇರಿದಂತೆ ಹಲವಾರು ನಾಯಕರು ಭಾಗಿಯಾಗಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: PM Modi Ugadi Wishes: ಯುಗಾದಿಗೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ಮೋದಿ