35,440 ಕೋಟಿ ರೂ. ಮೌಲ್ಯದ 2 ಬೃಹತ್ ಕೃಷಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಕೃಷಿ ಮತ್ತು ಸಂಬಂಧಿತ ವಲಯಗಳ ಒಟ್ಟಾರೆ ಅಭಿವೃದ್ಧಿಗಾಗಿ ಕಳೆದ 11 ವರ್ಷಗಳಲ್ಲಿ ತೆಗೆದುಕೊಂಡ ವಿವಿಧ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಎತ್ತಿ ತೋರಿಸಿದರು. "ರೈತರ ಹಿತದೃಷ್ಟಿಯಿಂದ, ನಾವು ಬೀಜದಿಂದ ಮಾರುಕಟ್ಟೆಗೆ (ಬೀಜ್ ಸೆ ಬಜಾರ್ ತಕ್) ಹಲವಾರು ಸುಧಾರಣೆಗಳನ್ನು ತೆಗೆದುಕೊಂಡಿದ್ದೇವೆ" ಎಂದು ಅವರು ಹೇಳಿದ್ದಾರೆ.
ನವದೆಹಲಿ, ಅಕ್ಟೋಬರ್ 11: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ರೈತರಿಗಾಗಿ 35,440 ಕೋಟಿ ರೂ.ಗಳ ಒಟ್ಟು ವೆಚ್ಚದೊಂದಿಗೆ ಎರಡು ಪ್ರಮುಖ ಕೃಷಿ ಯೋಜನೆಗಳಿಗೆ ಚಾಲನೆ ನೀಡಿದರು. ಇದರಲ್ಲಿ ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆಗಾಗಿ ಒಂದು ಮಿಷನ್ ಕೂಡ ಸೇರಿದೆ. ದೇಶೀಯ ಮತ್ತು ಜಾಗತಿಕ ಬೇಡಿಕೆಯನ್ನು ಪೂರೈಸಲು ಉತ್ಪಾದನೆಯನ್ನು ಹೆಚ್ಚಿಸುವಂತೆ ಮೋದಿ ರೈತರಿಗೆ ಕರೆ ನೀಡಿದರು. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತ (ವಿಕಸಿತ್ ಭಾರತ್)ದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ರೈತರು ನಿರ್ಣಾಯಕ ಪಾತ್ರ ವಹಿಸಬೇಕು ಎಂದು ಮೋದಿ ಹೇಳಿದ್ದಾರೆ.
24,000 ಕೋಟಿ ರೂ.ಗಳ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ (PM-DDKY) ಮತ್ತು ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತೆಗಾಗಿ 11,440 ಕೋಟಿ ರೂ.ಗಳ ಎರಡು ದೊಡ್ಡ ಯೋಜನೆಗಳು ಲಕ್ಷಾಂತರ ರೈತರ ಭವಿಷ್ಯವನ್ನು ಬದಲಾಯಿಸುತ್ತವೆ ಎಂದು ಅವರು ಹೇಳಿದ್ದಾರೆ. ಇದರೊಂದಿಗೆ, ಪ್ರಧಾನ ಮಂತ್ರಿ ಮೋದಿ ಕೃಷಿ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಆಹಾರ ಸಂಸ್ಕರಣಾ ಕ್ಷೇತ್ರಗಳಲ್ಲಿ 5,450 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಸುಮಾರು 815 ಕೋಟಿ ರೂ.ಗಳ ಹೆಚ್ಚುವರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

