ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ

Updated on: Jun 13, 2026 | 8:19 PM

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಫ್ರಾನ್ಸ್ ಮತ್ತು ಸ್ಲೋವಾಕಿಯಾ ದೇಶಗಳ ಪ್ರವಾಸಕ್ಕೆ ತೆರಳಿದ್ದಾರೆ. ಜಾಗತಿಕ ರಾಜತಾಂತ್ರಿಕತೆ ಮತ್ತು ಭಾರತದ ವಿದೇಶಾಂಗ ನೀತಿಯ ದೃಷ್ಟಿಯಿಂದ ಈ ಪ್ರವಾಸವು ಅತ್ಯಂತ ಮಹತ್ವದ್ದಾಗಿದೆ. ಭಾರತವು ಜಿ7 ಒಕ್ಕೂಟದ ಅಧಿಕೃತ ಸದಸ್ಯ ರಾಷ್ಟ್ರವಲ್ಲದಿದ್ದರೂ, ಜಾಗತಿಕ ಆರ್ಥಿಕತೆ ಮತ್ತು ರಾಜಕೀಯದಲ್ಲಿ ಭಾರತದ ಪ್ರಮುಖ ಪಾತ್ರವನ್ನು ಗುರುತಿಸಿ, ಶೃಂಗಸಭೆಯನ್ನು ಆಯೋಜಿಸುತ್ತಿರುವ ರಾಷ್ಟ್ರಗಳು ಪ್ರಧಾನಿ ಮೋದಿಯವರನ್ನು ವಿಶೇಷ ಆಹ್ವಾನಿತರನ್ನಾಗಿ ಭಾಗವಹಿಸಲು ಆಹ್ವಾನಿಸಿವೆ.

ನವದೆಹಲಿ, ಜೂನ್ 13: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಶನಿವಾರ) ಫ್ರಾನ್ಸ್ ಮತ್ತು ಸ್ಲೋವಾಕಿಯಾ ದೇಶಗಳಿಗೆ ಒಂದು ವಾರದ ಸುದೀರ್ಘ ಪ್ರವಾಸ ಕೈಗೊಂಡಿದ್ದಾರೆ. ಈ ಪ್ರವಾಸದ ಅವಧಿಯಲ್ಲಿ ಅವರು ಜಿ7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ವಿವಿಧ ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ ಕುರಿತು ವಿಶ್ವ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ತಮ್ಮ ವಿದೇಶಿ ಪ್ರವಾಸಕ್ಕೂ ಮುನ್ನ ನೀಡಿದ ಹೇಳಿಕೆಯಲ್ಲಿ ಪ್ರಧಾನಿ ಮೋದಿ (PM Modi) ಭಾರತದ ಕಾರ್ಯತಂತ್ರದ ದೃಷ್ಟಿಕೋನದಲ್ಲಿ ಫ್ರಾನ್ಸ್ ವಿಶೇಷ ಸ್ಥಾನವನ್ನು ಹೊಂದಿದೆ ಎಂದು ಹೇಳಿದ್ದಾರೆ. ಹಾಗೆಯೇ, 1993ರಲ್ಲಿ ಸ್ಲೋವಾಕಿಯಾ ಸ್ವತಂತ್ರ ರಾಷ್ಟ್ರವಾದ ನಂತರ ಭಾರತದ ಪ್ರಧಾನಮಂತ್ರಿಯೊಬ್ಬರು ಆ ದೇಶಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಇದು ಉಭಯ ದೇಶಗಳ ಬೆಳೆಯುತ್ತಿರುವ ದ್ವಿಪಕ್ಷೀಯ ಬಾಂಧವ್ಯದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ ಎಂದು ಅವರು ತಿಳಿಸಿದ್ದಾರೆ.

(Video Source: BJP)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 13, 2026 08:19 PM
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More