AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ7 ಶೃಂಗಸಭೆಗಾಗಿ ಭಾರತದಿಂದ ಇಟಲಿಗೆ ಹೊರಟ ಪ್ರಧಾನಿ ಮೋದಿ; ಇಲ್ಲಿದೆ ವಿಡಿಯೋ

ಜಿ7 ಶೃಂಗಸಭೆಗಾಗಿ ಭಾರತದಿಂದ ಇಟಲಿಗೆ ಹೊರಟ ಪ್ರಧಾನಿ ಮೋದಿ; ಇಲ್ಲಿದೆ ವಿಡಿಯೋ

ಸುಷ್ಮಾ ಚಕ್ರೆ
|

Updated on:Jun 13, 2024 | 7:57 PM

Share

50ನೇ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಂದು ಇಟಲಿಗೆ ಪ್ರಯಾಣ ಬೆಳೆಸಿದ್ದಾರೆ. ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಮೋದಿ ಅವರ ಮೊದಲ ಅಂತಾರಾಷ್ಟ್ರೀಯ ಪ್ರವಾಸವಾಗಿದೆ. ಉನ್ನತ ಮಟ್ಟದ ನಿಯೋಗದೊಂದಿಗೆ ಪ್ರಧಾನಿ ಮೋದಿ ಜೂನ್ 14ರಂದು ಔಟ್ರೀಚ್ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ (Lok Sabha Elections 2024) ಗೆದ್ದು ಸತತ ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ನರೇಂದ್ರ ಮೋದಿ (Narendra Modi) ಜಿ7 ಶೃಂಗಸಭೆಯಲ್ಲಿ (G7 Summit) ಪಾಲ್ಗೊಳ್ಳಲು ಇಂದು ಇಟಲಿಗೆ ತೆರಳಿದ್ದಾರೆ. ಇದು ಈ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅವರ ಮೊದಲ ಅಂತಾರಾಷ್ಟ್ರೀಯ ಭೇಟಿ ಅಥವಾ ಪ್ರಯಾಣವಾಗಿದೆ. ಜೂನ್ 14 ರಂದು G7 ಔಟ್ರೀಚ್ ಶೃಂಗಸಭೆಯನ್ನು ನಡೆಸುತ್ತಿರುವ ಅಪುಲಿಯಾ ಪ್ರದೇಶಕ್ಕೆ ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದಾರೆ.

ಇಟಲಿಗೆ ಹೊರಡುವ ಮುನ್ನ ಮಾತನಾಡಿದ ಪ್ರಧಾನಿ ಮೋದಿ, G7 ಔಟ್‌ರೀಚ್ ಶೃಂಗಸಭೆಯು ಜಾಗತಿಕ ದಕ್ಷಿಣಕ್ಕೆ ನಿರ್ಣಾಯಕ ವಿಷಯಗಳ ಕುರಿತು ಚರ್ಚಿಸಲು ಒಂದು ಅವಕಾಶವಾಗಿದೆ ಎಂದು ಹೇಳಿದರು. ಚರ್ಚೆಯ ಸಮಯದಲ್ಲಿ ಕೃತಕ ಬುದ್ಧಿಮತ್ತೆ, ಶಕ್ತಿ, ಆಫ್ರಿಕಾ ಮತ್ತು ಮೆಡಿಟರೇನಿಯನ್ ಬಗ್ಗೆ ಗಮನ ಹರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 13, 2024 07:25 PM