Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿ ಪ್ರಧಾನಿ ಮೆಲೋನಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಇಟಲಿ ಪ್ರಧಾನಿ ಮೆಲೋನಿಯನ್ನು ಭೇಟಿಯಾದ ಪ್ರಧಾನಿ ಮೋದಿ

ನಯನಾ ರಾಜೀವ್
|

Updated on: Nov 19, 2024 | 9:11 AM

ಬ್ರೆಜಿಲ್​ನಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು, ಅಲ್ಲಿ ಇಟಲಿ ಪ್ರಧಾನಿ ಮೆಲೋನಿಯವರನ್ನು ಭೇಟಿಯಾದರು. ಬ್ರೆಜಿಲ್, ಸಿಂಗಾಪುರ, ಬ್ರಿಟನ್, ಇಟಲಿ, ಫ್ರಾನ್ಸ್, ಇಂಡೋನೇಷ್ಯಾ ಸೇರಿದಂತೆ ಹಲವು ಜಾಗತಿಕ ನಾಯಕರ ಜತೆ ಮಾತುಕತೆ ನಡೆಸಿದರು.

ರಿಯೊ ಡಿ ಜನೈರೊದಲ್ಲಿನ ಮ್ಯೂಸಿಯಂ ಆಫ್ ಮಾಡರ್ನ್ ಆರ್ಟ್‌ನಲ್ಲಿ ಎರಡು ದಿನಗಳ ಶೃಂಗಸಭೆಯಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡನ್, ಪಿಎಂ ಮೋದಿ, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಸೇರಿದಂತೆ ಇತರ ನಾಯಕರು ಭಾಗವಹಿಸಿದ್ದರು.

ಇದಲ್ಲದೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ರಕ್ಷಣೆ, ಭದ್ರತೆ ಮತ್ತಿತರ ಸಂಬಂಧಗಳ ಬಲವರ್ಧನೆ ಕುರಿತು ಚರ್ಚಿಸಲಾಯಿತು.
ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ತಮ್ಮ ಅಧಿಕೃತ ಎಕ್ಸ್ (ಹಿಂದಿನ ಟ್ವಿಟರ್) ಹ್ಯಾಂಡಲ್‌ನಲ್ಲಿ ಕೆಲವು ಚಿತ್ರಗಳನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.

ಇದಕ್ಕೂ ಮುನ್ನ ಬ್ರೆಜಿಲ್‌ನಲ್ಲಿ ಜಿ20 ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಇಂಡೋನೇಷ್ಯಾ ಮತ್ತು ಪೋರ್ಚುಗಲ್‌ನ ನಾಯಕರನ್ನು ಭೇಟಿಯಾದರು. ಪ್ರಧಾನಿ ಮೋದಿ ಅವರು ವಾಣಿಜ್ಯ ಮತ್ತು ರಕ್ಷಣೆಯಂತಹ ಕ್ಷೇತ್ರಗಳಲ್ಲಿ ಎರಡೂ ರಾಷ್ಟ್ರಗಳೊಂದಿಗೆ ಬಾಂಧವ್ಯವನ್ನು ಬಲಪಡಿಸಲು ಒತ್ತು ನೀಡಿದರು.

ಭಾರತ-ಇಂಡೋನೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ವಿಸ್ತರಿಸುವ ಕುರಿತು ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರಿಗೆ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ