ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ

Edited By:

Updated on: Jul 30, 2026 | 2:14 PM

ಆಗಸ್ಟ್ 1ರಂದು ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ವಿವೇಕ ಸ್ಮಾರಕ ಮತ್ತು ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ವಿಶೇಷ ವಿಮಾನ ಮತ್ತು ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಪ್ರಧಾನಿಗಳ ಭೇಟಿಗಾಗಿ ಭದ್ರತಾ ವ್ಯವಸ್ಥೆಗಳು, ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಾಣ ಹಾಗೂ ಟ್ರಯಲ್ ರನ್‌ಗಳನ್ನು ನಡೆಸಲಾಗುತ್ತಿದೆ.

ಮೈಸೂರು, ಜುಲೈ 30: ಆಗಸ್ಟ್ 1ರಂದು ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಿವೇಕ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. 1892ರಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಸ್ಥಳದಲ್ಲಿ ಈ ಸ್ಮಾರಕ ನಿರ್ಮಿಸಲಾಗಿದೆ. ಪ್ರಧಾನಿ ಮೋದಿ ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್‌ಗಳಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಓವಲ್ ಮೈದಾನಕ್ಕೆ ಬರಲಿದ್ದಾರೆ. ಇದಕ್ಕಾಗಿ ಮೂರು ತಾತ್ಕಾಲಿಕ ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದ್ದು, ಹೆಲಿಕಾಪ್ಟರ್ ಇಳಿಯುವಿಕೆಯ ಟ್ರಯಲ್ ರನ್‌ಗಳನ್ನು ಈಗಾಗಲೇ ನಡೆಸಲಾಗುತ್ತಿದೆ. ಭದ್ರತಾ ದೃಷ್ಟಿಯಿಂದ, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ, ಎಸ್ಪಿಜಿ ಕಮಾಂಡೋಗಳು ಮತ್ತು ಸ್ಥಳೀಯ ಪೊಲೀಸರೊಂದಿಗೆ ಸಮಗ್ರ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಧಾನಿ ಸಂಚರಿಸುವ ಎಲ್ಲಾ ರಸ್ತೆಗಳಲ್ಲೂ ಬಿಗಿ ಭದ್ರತೆ ಒದಗಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More