Modi Cabinet Meeting: ನೂತನ ಸಚಿವರ ಜೊತೆ ಪಿಎಂ ನರೇಂದ್ರ ಮೋದಿ ಮೊದಲ ಸಂಪುಟ ಸಭೆ

Updated on: Jun 10, 2024 | 7:00 PM

ಭಾನುವಾರ ಸಂಜೆ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ನರೇಂದ್ರ ಮೋದಿ ಇಂದು ನೂತನ ಸಚಿವರ ಜೊತೆ ಸಂಪುಟ ಸಭೆ ನಡೆಸಿದ್ದಾರೆ. ಇನ್ನೂ ಸಚಿವರಿಗೆ ಖಾತೆಗಳ ಹಂಚಿಕೆಯಾಗಿಲ್ಲ.

ನವದೆಹಲಿ: ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ದೆಹಲಿಯ ತಮ್ಮ ನಿವಾಸದಲ್ಲಿ ಇದೀಗ ತಮ್ಮ ಮೊದಲ ಸಂಪುಟ ಸಭೆ (Cabinet Meeting) ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ನರೇಂದ್ರ ಮೋದಿಯವರನ್ನು ಹೊರತುಪಡಿಸಿ ಒಟ್ಟು 71 ಸಚಿವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು. ಯಾವ ಸಚಿವರಿಗೆ ಯಾವ ಖಾತೆ ಎಂಬುದು ಇನ್ನೂ ಗುಟ್ಟಾಗಿಯೇ ಉಳಿದಿದೆ.

ಮೋದಿ 3.0 ಸಚಿವ ಸಂಪುಟದ ಮೊದಲ ಸಭೆಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗ್ರಾಮೀಣ ಮತ್ತು ನಗರ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇಂದು ಬೆಳಗ್ಗೆ ಪ್ರಧಾನಿ ಮೋದಿ ಅವರು ಸುಮಾರು 9.3 ಕೋಟಿ ರೈತರಿಗೆ ಸುಮಾರು 20,000 ಕೋಟಿ ರೂ. ಬಿಡುಗಡೆ ಮಾಡಲು ಅಧಿಕಾರ ನೀಡುವ ತಮ್ಮ ಮೊದಲ ಕಡತಕ್ಕೆ ಸಹಿ ಹಾಕಿದರು.

ಹೊಸ ಮತ್ತು ಹಳೆಯ 30 ಕ್ಯಾಬಿನೆಟ್ ಸಚಿವರು ನಿನ್ನೆ ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸ್ವತಂತ್ರ ಉಸ್ತುವಾರಿ ಹೊಂದಿರುವ ಐವರು ರಾಜ್ಯ ಸಚಿವರು ಮತ್ತು 36 ಕಿರಿಯ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More