ಜನಜಾತೀಯ ಗೌರವ ದಿವಸದ ಪ್ರಯುಕ್ತ ಸಂಸತ್ ಆವರಣದಲ್ಲಿರುವ ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ

Updated on: Nov 15, 2026 | 2:41 PM

ಆದಿವಾಸಿಗಳ ಆರಾಧ್ಯ ದೈವ, ಸ್ವಾತಂತ್ರ್ಯ ಹೋರಾಟಗಾರ 'ಧರ್ತಿ ಆಬಾ' ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿ ಹಾಗೂ 'ಜನಜಾತೀಯ ಗೌರವ ದಿವಸ'ದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಸಂಸತ್ ಭವನದ ಆವರಣದಲ್ಲಿರುವ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಇಂದು ದೇಶಾದ್ಯಂತ ಆಚರಿಸಲಾಗುವ 'ಜನಜಾತೀಯ ಗೌರವ ದಿವಸ'ದ ಪ್ರಯುಕ್ತ ನವದೆಹಲಿಯ ಸಂಸತ್ ಆವರಣದ ಪ್ರೇರಣಾ ಸ್ಥಳದಲ್ಲಿರುವ ಭಗವಾನ್ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ನವದೆಹಲಿ, ನವೆಂಬರ್ 15: ಆದಿವಾಸಿಗಳ ಆರಾಧ್ಯ ದೈವ, ಸ್ವಾತಂತ್ರ್ಯ ಹೋರಾಟಗಾರ ‘ಧರ್ತಿ ಆಬಾ’ ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿ ಹಾಗೂ ‘ಜನಜಾತೀಯ ಗೌರವ ದಿವಸ’ದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಸಂಸತ್ ಭವನದ ಆವರಣದಲ್ಲಿರುವ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಇಂದು ದೇಶಾದ್ಯಂತ ಆಚರಿಸಲಾಗುವ ‘ಜನಜಾತೀಯ ಗೌರವ ದಿವಸ’ದ ಪ್ರಯುಕ್ತ ನವದೆಹಲಿಯ ಸಂಸತ್ ಆವರಣದ ಪ್ರೇರಣಾ ಸ್ಥಳದಲ್ಲಿರುವ ಭಗವಾನ್ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಬುಡಕಟ್ಟು ಸಮುದಾಯಗಳನ್ನು ಸಂಘಟಿಸಿ ಹೋರಾಡಿದ ಬಿರ್ಸಾ ಮುಂಡಾ ಅವರ ಅಪ್ರತಿಮ ತ್ಯಾಗ, ಧೈರ್ಯ ಮತ್ತು ಆದಿವಾಸಿ ಸಂಸ್ಕೃತಿಯ ರಕ್ಷಣೆಗೆ ಅವರು ನೀಡಿದ ಕೊಡುಗೆಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಭಾರತದ ಸ್ವಾತಂತ್ರ್ಯ ಸಂಗ್ರಾಮ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಬುಡಕಟ್ಟು ಸಮುದಾಯಗಳ ಐತಿಹಾಸಿಕ ಪಾತ್ರ ಮತ್ತು ಶ್ರೀಮಂತ ಪರಂಪರೆಯನ್ನು ಗೌರವಿಸುವ ಸಲುವಾಗಿ ಕೇಂದ್ರ ಸರ್ಕಾರವು ಪ್ರತಿ ವರ್ಷ ನವೆಂಬರ್ 15ರಂದು ‘ಜನಜಾತೀಯ ಗೌರವ ದಿವಸ’ವನ್ನಾಗಿ ಆಚರಿಸುತ್ತಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More