ಗಯಾನಾದಲ್ಲಿ ಮಹಾತ್ಮ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಪ್ರಧಾನಿ ಮೋದಿ

Updated on: Nov 22, 2024 | 10:31 AM

PM Modi Ram Bhajan in Guyana: ಗಯಾನಾದಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪಿತನಿಗೆ ಗೌರವ ಸಲ್ಲಿಸಿದರು. ಬಳಿಕ ರಾಮ ಭಜನೆ ಮಾಡುತ್ತಿದ್ದ ತಂಡದವರ ಜತೆ ಸೇರಿ ತಾಳ ನುಡಿಸಿ ಸಂಭ್ರಮಿಸಿದರು. ವಿಡಿಯೋ ಇಲ್ಲಿದೆ ನೋಡಿ.

ಪ್ರಧಾನಿ ನರೇಂದ್ರ ಮೋದಿ ಐದು ದೇಶಗಳಿಗೆ ಮೂರು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ವಿದೇಶ ಪ್ರವಾಸದ ಕೊನೆಯ ದಿನದಂದು ಅವರು ಗಯಾನಾದಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಈ ವೇಳೆ ಪ್ರಧಾನಿ ಮೋದಿ ಅವರು ಗಯಾನಾದಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕಕ್ಕೆ ತೆರಳಿದರು. ಅಲ್ಲಿ ಅವರು ರಾಷ್ಟ್ರಪಿತನಿಗೆ ಗೌರವ ಸಲ್ಲಿಸಿದರು. ಆ ಸಂದರ್ಭದಲ್ಲಿ ರಾಮ ಭಜನೆ ಮಾಡುತ್ತಿದ್ದ ತಂಡದ ಜತೆ ತಾವೂ ಸೇರಿಕೊಂಡರು. ತಾಳ (ಚಕ್ರತಾಳ) ನುಡಿಸಿ ಸಂಭ್ರಮಿಸಿದರು. ವಿಡಿಯೋ ಇಲ್ಲಿದೆ ನೋಡಿ.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಗಯಾನಾದ ಜಾರ್ಜ್‌ಟೌನ್‌ನಲ್ಲಿರುವ ಭಾರತೀಯ ಸ್ಮಾರಕಕ್ಕೆ ಭೇಟಿ ನೀಡಿ, ಅಲ್ಲಿ ಸಸಿ ನೆಟ್ಟಿದ್ದಾರೆ. ಕಳೆದ 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಏಕೈಕ ಭಾರತೀಯ ಪ್ರಧಾನಿ ಮೋದಿ ಆಗಿದ್ದಾರೆ. ಗಯಾನಾಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಅಲ್ಲಿನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 22, 2024 09:31 AM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More