ರಾಮ್‌ಲೀಲಾ ಮೈದಾನದಲ್ಲಿ ವಿಜಯದಶಮಿ ಸಂಭ್ರಮ; ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ಪ್ರಸಿದ್ಧ ಇಂದ್ರಪ್ರಸ್ಥ ರಾಮ್‌ಲೀಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ದಸರಾ ಮಹೋತ್ಸವ ಮತ್ತು ರಾವಣ ದಹನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಕಾರ್ಯಕ್ರಮದ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ವಿಶೇಷ ಪೂಜೆ ನೆರವೇರಿಸಿ, ದೇಶದ ಜನತೆಗೆ ವಿಜಯದಶಮಿಯ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಈ ವೇಳೆ ಕೆಡಕಿನ ಸಂಕೇತವಾದ ರಾವಣನ ಪ್ರತಿಕೃತಿಯ ದಹನದ ಕ್ಷಣಕ್ಕೆ ಸಾಕ್ಷಿಯಾದರು.
ನವದೆಹಲಿ, ಅಕ್ಟೋಬರ್ 20: ವಿಜಯದಶಮಿ ಹಬ್ಬದ ಸಡಗರದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ಪ್ರಸಿದ್ಧ ಇಂದ್ರಪ್ರಸ್ಥ ರಾಮ್‌ಲೀಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ದಸರಾ ಮಹೋತ್ಸವ ಮತ್ತು ರಾವಣ ದಹನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಕಾರ್ಯಕ್ರಮದ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ವಿಶೇಷ ಪೂಜೆ ನೆರವೇರಿಸಿ, ದೇಶದ ಜನತೆಗೆ ವಿಜಯದಶಮಿಯ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಈ ವೇಳೆ ಕೆಡಕಿನ ಸಂಕೇತವಾದ ರಾವಣನ ಪ್ರತಿಕೃತಿಯ ದಹನದ ಕ್ಷಣಕ್ಕೆ ಸಾಕ್ಷಿಯಾದರು.
ಪ್ರಧಾನಿ ಮೋದಿಯವರ ಆಗಮನದ ಹಿನ್ನೆಲೆಯಲ್ಲಿ ಇಂದ್ರಪ್ರಸ್ಥ ರಾಮ್‌ಲೀಲಾ ಮೈದಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅತಿ ಬಿಗಿ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ದೆಹಲಿ ಪೊಲೀಸರು ಮತ್ತು ವಿಶೇಷ ಭದ್ರತಾ ಪಡೆಗಳು (SPG) ಕಾರ್ಯಕ್ರಮದ ಸ್ಥಳದಲ್ಲಿ ಕಣ್ಗಾವಲು ಇರಿಸಿದ್ದವು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

