G7 Summit: ಇಟಲಿಯ ಶೃಂಗಸಭೆಯಲ್ಲಿ ಭಾರತದ ದೃಷ್ಟಿಕೋನ ಪ್ರಸ್ತುತಪಡಿಸಿದ ಮೋದಿ; ಇಲ್ಲಿದೆ ಹೈಲೈಟ್ಸ್

|

Updated on: Jun 15, 2024 | 10:50 AM

PM Narendra Modi: ಪ್ರಧಾನಿ ನರೇಂದ್ರ ಮೋದಿ ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯನ್ನು ಮುಗಿಸಿ ಭಾರತಕ್ಕೆ ಮರಳಿದ್ದಾರೆ. ಈ ವೇಳೆ ಕೂಡ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಮಾತುಕತೆ, ಸೆಲ್ಫಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೆಲೋಡಿ ಎಂಬ ಹ್ಯಾಷ್​ಡ್ಯಾಗ್​ನಡಿ ಮೋದಿ- ಮೆಲೋನಿ ಫೋಟೋಗಳು ಎಲ್ಲೆಡೆ ಹರಿದಾಡುತ್ತಿವೆ.

ನವದೆಹಲಿ: ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ (G7 Summit 2024) ಭಾಗವಹಿಸಲು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಭಾರತಕ್ಕೂ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆ ತಮ್ಮ ವಿಶೇಷ ನಿಯೋಗದೊಂದಿಗೆ ಇಟಲಿಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಮುಂಜಾನೆ ದೆಹಲಿಗೆ ವಾಪಾಸಾಗಿದ್ದಾರೆ. ಇಟಲಿಯ ಶೃಂಗಸಭೆಯಲ್ಲಿ ಫ್ರಾನ್ಸ್, ಕೆನಡಾ, ಬ್ರಿಟನ್, ಉಕ್ರೇನ್, ಅಮೆರಿಕಾ, ಇಟಲಿ ಮುಂತಾದ ದೇಶಗಳ ನಾಯಕರ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ. ಒಂದು ದಿನದ ಮೋದಿ ಇಟಲಿಯ ಭೇಟಿಯ ಹೈಲೈಟ್ಸ್ ಇಲ್ಲಿದೆ.

ಇಟಲಿ ಪ್ರವಾಸ ಮುಗಿಸಿ ಬಂದಿರುವ ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ಅಪುಲಿಯಾದಲ್ಲಿ ನಡೆದ G7 ಶೃಂಗಸಭೆಯಲ್ಲಿ ವಿಶ್ವ ನಾಯಕರೊಂದಿಗೆ ಸಂವಹನ ನಡೆಸಿದ್ದೇವೆ ಮತ್ತು ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದೇವೆ. ಒಟ್ಟಾಗಿ, ಜಾಗತಿಕ ಸಮುದಾಯಕ್ಕೆ ಪ್ರಯೋಜನಕಾರಿ ಮತ್ತು ಭವಿಷ್ಯದ ಪೀಳಿಗೆಗೆ ಉತ್ತಮ ಜಗತ್ತನ್ನು ಸೃಷ್ಟಿಸುವ ಪರಿಣಾಮಕಾರಿ ಪರಿಹಾರಗಳನ್ನು ರಚಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಆತ್ಮೀಯ ಆತಿಥ್ಯಕ್ಕಾಗಿ ನಾನು ಇಟಲಿಯ ಜನರಿಗೆ ಮತ್ತು ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us on