ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್‌ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಛತ್ತೀಸ್‌ಗಢದಲ್ಲಿ 33,700 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಬಿಲಾಸ್‌ಪುರ ಜಿಲ್ಲೆಯ ಮೊಹಭಟ್ಟ ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಮೋದಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿದರು. ಛತ್ತೀಸ್ಗಢ ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಉಪಕ್ರಮಗಳಿಗಾಗಿ ರಾಜ್ಯ ಸರ್ಕಾರವನ್ನು ಅಭಿನಂದಿಸಿದರು. ಅಭಿವೃದ್ಧಿಯ ಪ್ರಯೋಜನಗಳು ಪ್ರತಿಯೊಬ್ಬ ವ್ಯಕ್ತಿಯನ್ನು ತಲುಪುವಂತೆ ನೋಡಿಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಒತ್ತಿ ಹೇಳಿದರು.
ಬಿಲಾಸ್‌ಪುರ, ಮಾರ್ಚ್ 30: ಛತ್ತೀಸ್‌ಗಢದ ಬಿಲಾಸ್‌ಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಆತ್ಮೀಯ ಮತ್ತು ಸಾಂಪ್ರದಾಯಿಕ ಸ್ವಾಗತ ದೊರೆಯಿತು. ಬಿಲಾಸ್‌ಪುರದಲ್ಲಿ ಪ್ರಧಾನಿ ಮೋದಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ವೇಳೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಪ್ರಧಾನಿ ಮೋದಿ ಅವರಿಗೆ ಸಾಂಪ್ರದಾಯಿಕ ಸ್ವಾಗತ ದೊರೆಯಿತು. ಬುಡಕಟ್ಟು ಕಲಾವಿದರು ಪ್ರಧಾನಿ ಮೋದಿಯವರಿಗೆ ಗೌರವಾರ್ಥವಾಗಿ ಜಾನಪದ ನೃತ್ಯವನ್ನು ಪ್ರದರ್ಶಿಸಿ ಸ್ವಾಗತಿಸಿದರು. ಸಾಂಸ್ಕೃತಿಕ ಪ್ರದರ್ಶನವು ಈ ಪ್ರದೇಶದ ಶ್ರೀಮಂತ ಪರಂಪರೆ ಮತ್ತು ಆತ್ಮೀಯ ಆತಿಥ್ಯವನ್ನು ಪ್ರದರ್ಶಿಸಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್ ಕಣ್ಣು, ನೋಟೀಸ್

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?

Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ

ತವರಿನಲ್ಲಿ ಗೆದ್ದ ಆರ್ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
