ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಜೋರ್ಡಾನ್ ತಲುಪಿದ್ದಾರೆ. ಈ ವೇಳೆ ಖುದ್ದಾಗಿ ಜೋರ್ಡಾನ್ ಪ್ರಧಾನಿ ಜಾಫರ್ ಹಸನ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮೋದಿಯನ್ನು ಬರಮಾಡಿಕೊಂಡರು. ಬಳಿಕ ಭಾರತದ ಪ್ರದಾನಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಜೋರ್ಡಾನ್ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಡಿಸೆಂಬರ್ 15) ಜೋರ್ಡಾನ್‌ಗೆ ಭೇಟಿ ನೀಡಿದ್ದಾರೆ. ನಾಳೆ ಪ್ರಧಾನಿ ಮೋದಿ ಜೋರ್ಡಾನ್ನಿಂದ ಹೊರಡಲಿದ್ದಾರೆ.
ನವದೆಹಲಿ, ಡಿಸೆಂಬರ್ 15: ಪ್ರಧಾನಿ ನರೇಂದ್ರ ಮೋದಿ (PM Modi in Jordan) ಇಂದು ಸಂಜೆ ಜೋರ್ಡಾನ್ ತಲುಪಿದ್ದಾರೆ. ಈ ವೇಳೆ ಖುದ್ದಾಗಿ ಜೋರ್ಡಾನ್ ಪ್ರಧಾನಿ ಜಾಫರ್ ಹಸನ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮೋದಿಯನ್ನು ಬರಮಾಡಿಕೊಂಡರು. ಬಳಿಕ ಭಾರತದ ಪ್ರದಾನಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಜೋರ್ಡಾನ್‌ಗೆ ಅಧಿಕೃತ ಭೇಟಿಯ ಆರಂಭವನ್ನು ಸೂಚಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅಮ್ಮನ್‌ಗೆ ತೆರಳಿದಾಗ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು.
ಜೋರ್ಡಾನ್ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಡಿಸೆಂಬರ್ 15) ಜೋರ್ಡಾನ್‌ಗೆ ಭೇಟಿ ನೀಡಿದ್ದಾರೆ. ನಾಳೆ ಪ್ರಧಾನಿ ಮೋದಿ ಜೋರ್ಡಾನ್ನಿಂದ ಹೊರಡಲಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Dec 15, 2025 08:11 PM