ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

Updated on: May 15, 2026 | 8:01 PM

5 ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಯುಎಇಗೆ ತೆರಳಿದ್ದಾರೆ. ಅಬುಧಾಬಿಯಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ನೀಡಲಾಯಿತು. ಅಬುಧಾಬಿಯ ವಿಮಾನ ನಿಲ್ದಾಣದಲ್ಲಿ, ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಪ್ರಧಾನಿ ಮೋದಿಯನ್ನು ತಬ್ಬಿಕೊಂಡು ಸ್ವಾಗತಿಸಿದರು. ಬಳಿಕ ಅವರಿಗೆ ಗೌರವ ರಕ್ಷೆ ನೀಡಲಾಯಿತು. ಈ ಆತ್ಮೀಯ ಸ್ವಾಗತಕ್ಕಾಗಿ ಮೋದಿ ಯುಎಇ ನಾಯಕರಿಗೆ ಧನ್ಯವಾದ ಅರ್ಪಿಸಿದರು. ಈ ದೇಶಕ್ಕೆ ಭೇಟಿ ನೀಡುವುದು ನನಗೆ ಎರಡನೇ ಮನೆಗೆ ಬಂದಂತೆ ಭಾಸವಾಗುತ್ತದೆ ಎಂದು ಮೋದಿ ಹೇಳಿದರು.

ಅಬುಧಾಬಿ, ಮೇ 15: ಪ್ರಧಾನಿ ನರೇಂದ್ರ ಮೋದಿ (PM Modi in UAE) ಇಂದು ಕೇವಲ 4 ಗಂಟೆಗಳ ಭೇಟಿಗಾಗಿ ಅಬುಧಾಬಿಗೆ ತೆರಳಿದ್ದರು. ಈ ಮೂಲಕ ಅವರು ತಮ್ಮ 5 ರಾಷ್ಟ್ರಗಳ ಪ್ರವಾಸವನ್ನು ಪ್ರಾರಂಭಿಸಿದರು. ಅಲ್ಲಿ ಅವರಿಗೆ ಯುಎಇಯ ನಾಯಕರಿಂದ ಭವ್ಯ ಸ್ವಾಗತ ದೊರೆಯಿತು.

ಅಬುಧಾಬಿಯ ವಿಮಾನ ನಿಲ್ದಾಣದಲ್ಲಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಪ್ರಧಾನಿ ಮೋದಿಯನ್ನು ತಬ್ಬಿಕೊಂಡು ಸ್ವಾಗತಿಸಿದರು. ಬಳಿಕ ಅವರಿಗೆ ಗೌರವ ರಕ್ಷೆ ನೀಡಲಾಯಿತು. ಈ ಆತ್ಮೀಯ ಸ್ವಾಗತಕ್ಕಾಗಿ ಮೋದಿ ಯುಎಇ ನಾಯಕರಿಗೆ ಧನ್ಯವಾದ ಅರ್ಪಿಸಿದರು. ಈ ದೇಶಕ್ಕೆ ಭೇಟಿ ನೀಡುವುದು ನನಗೆ ಎರಡನೇ ಮನೆಗೆ ಬಂದಂತೆ ಭಾಸವಾಗುತ್ತದೆ ಎಂದು ಮೋದಿ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More