ಆಕ್ಲೆಂಡ್ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಪ್ರಧಾನಿ ನರೇಂದ್ರ ಮೋದಿ ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಭೇಟಿ ನೀಡಿದ್ದು, ಭಾರತೀಯ ಸಮುದಾಯ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರೂ ಉಪಸ್ಥಿತರಿದ್ದು, ಮೋದಿ ಸ್ವಾಗತಕ್ಕೆ ಸಾವಿರಾರು ಜನ ಸೇರಿದ್ದಾರೆ. ಭರ್ಜರಿ ಸಿದ್ಧತೆಗಳು ನಡೆದಿವೆ. ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಕೊನೆಯದಾಗಿ ಈಗ ನ್ಯೂಜಿಲೆಂಡ್ನಲ್ಲಿದ್ದಾರೆ.
ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸದ್ಯ ನ್ಯೂಜಿಲೆಂಡ್ನಲ್ಲಿದ್ದು, ಕೆಲವೇ ಕ್ಷಣಗಳಲ್ಲಿ ಆಕ್ಲೆಂಡ್ನಲ್ಲಿ ನಡೆಯಲಿರುವ ಭಾರತೀಯ ಸಮುದಾಯದವರ ಕಾರ್ಯಕ್ರಮದಲ್ಲಿ (Community Event) ಭಾಗವಹಿಸಲಿದ್ದಾರೆ. ಅವರ ಜತೆ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಸಹ ಉಪಸ್ಥಿತರಿರಲಿದ್ದಾರೆ. ಸದ್ಯ, ಆಕ್ಲೆಂಡ್ನಲ್ಲಿ ಭಾರತೀಯ ಸಮುದಾಯದವರೂ ಸೇರಿದಂತೆ ಪ್ರಧಾನಿ ಮೋದಿ ಸ್ವಾಗತಕ್ಕೆ ಸಾವಿರಾರು ಜನ ಸೇರಿದ್ದಾರೆ. 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್ಗೆ ನೀಡಿರುವ ಭೇಟಿ ಇದಾಗಿದ್ದು, ಐತಿಹಾಸಿಕ ಮಹತ್ವ ಪಡೆದಿದೆ. ಕಮ್ಯೂನಿಟಿ ಇವೆಂಟ್ಗೂ ಮುನ್ನ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿರುವ ಮೋದಿ, ಉಭಯ ದೇಶಗಳ ಬಾಂಧವ್ಯ ವೃದ್ಧಿ ನಿಟ್ಟಿನಲ್ಲಿ ಮಹತ್ವದ ಕರೆ ನೀಡಿದ್ದಾರೆ. 2030ರ ವೇಳೆಗೆ ಉಭಯ ದೇಶಗಳ ನಡುವೆ 35,000 ಕೋಟಿ ರೂ. ದ್ವಿಪಕ್ಷೀಯ ವ್ಯಾಪಾರದ ಗುರಿ ಹೊಂದಲಾಗಿದೆ ಎಂದು ಉಭಯ ನಾಯಕರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

