ಪ್ರಧಾನಿ ಮೋದಿಗೆ ಗಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ‘ಆರ್ಡರ್ ಆಫ್ ಎಕ್ಸಲೆನ್ಸ್’ ನೀಡಿ ಗೌರವಿಸಿದ ಅಧ್ಯಕ್ಷ ಇರ್ಫಾನ್ ಅಲಿ
ಗಯಾನಾ ಅಧ್ಯಕ್ಷ ಡಾ. ಇರ್ಫಾನ್ ಅಲಿ ಅವರು ಜಾರ್ಜ್‌ಟೌನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ 'ಆರ್ಡರ್ ಆಫ್ ಎಕ್ಸಲೆನ್ಸ್' ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ, ಗಯಾನಾದ ಅತ್ಯುನ್ನತ ಪ್ರಶಸ್ತಿಯನ್ನು ನನಗೆ ನೀಡಿ ಗೌರವಿಸಿದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಇರ್ಫಾನ್ ಅಲಿ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.
ಗಯಾನಾ ಅಧ್ಯಕ್ಷ ಡಾ. ಇರ್ಫಾನ್ ಅಲಿ ಜಾರ್ಜ್‌ಟೌನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಎಕ್ಸಲೆನ್ಸ್’ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ, ಗಯಾನಾದ ಅತ್ಯುನ್ನತ ಪ್ರಶಸ್ತಿಯನ್ನು ನನಗೆ ನೀಡಿ ಗೌರವಿಸಿದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಇರ್ಫಾನ್ ಅಲಿ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.
ಈ ಗೌರವ ನನ್ನದು ಮಾತ್ರವಲ್ಲ, ಭಾರತದ 140 ಕೋಟಿ ಜನರ ಗೌರವ. ಇದು ನಮ್ಮ ಸಂಬಂಧಕ್ಕೆ ನಿಮ್ಮ ಆಳವಾದ ಬದ್ಧತೆಗೆ ಜೀವಂತ ಸಾಕ್ಷಿಯಾಗಿದೆ. ಇದು ಪ್ರತಿಯೊಂದು ಕ್ಷೇತ್ರದಲ್ಲೂ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದರು.
ಭಾರತವೂ ಗಯಾನಾದೊಂದಿಗೆ ಪ್ರತಿ ಕ್ಷೇತ್ರದಲ್ಲೂ ಹೆಗಲಿಗೆ ಹೆಗಲು ಕೊಟ್ಟು ನಡೆಯಲು ಸಿದ್ಧವಾಗಿದೆ. ಎರಡು ಪ್ರಜಾಪ್ರಭುತ್ವ ರಾಷ್ಟ್ರಗಳಾಗಿ ನಮ್ಮ ಸಹಕಾರವು ದ್ವಿಪಕ್ಷೀಯ ಸಂಬಂಧಗಳಿಗೆ ಮಾತ್ರವಲ್ಲ, ಇಡೀ ಜಾಗತಿಕ ದಕ್ಷಿಣಕ್ಕೆ ಮುಖ್ಯವಾಗಿದೆ ಎಂದು ಮೋದಿ ಹೇಳಿದ್ದಾರೆ.
ಹಲವಾರು ನದಿಗಳು, ಜಲಪಾತಗಳು ಮತ್ತು ಸರೋವರಗಳಿಂದ ಆಶೀರ್ವದಿಸಲ್ಪಟ್ಟಿರುವ ಗಯಾನಾವನ್ನು ‘ಅನೇಕ ಜಲಗಳ ನಾಡು’ ಎಂದು ಕರೆಯಲಾಗುತ್ತದೆ. ಗಯಾನದ ನದಿಗಳು ಇಲ್ಲಿನ ಜನರ ಸಾಂಸ್ಕೃತಿಕ ಅಸ್ಮಿತೆಯ ಭಾಗವಾಗಿರುವಂತೆಯೇ, ಭಾರತದ ಮಹಾನ್ ನದಿಗಳಾದ ಗಂಗಾ, ಯಮುನಾ ಮತ್ತು ಬ್ರಹ್ಮಪುತ್ರ ನಮ್ಮ ಪ್ರಾಚೀನ ನಾಗರಿಕತೆಯ ಜನ್ಮಸ್ಥಳವಾಗಿದೆ. ಭಾರತ ಮತ್ತು ಗಯಾನಾ ನಡುವಿನ ಸಾಮ್ಯತೆಗಳ ಅನೇಕ ಉದಾಹರಣೆಗಳಿವೆ, ಇದು ನಮ್ಮ ಐತಿಹಾಸಿಕ ಸಂಬಂಧಗಳನ್ನು ಇನ್ನಷ್ಟು ಗಾಢಗೊಳಿಸುತ್ತದೆ ಎಂದರು.
ಮತ್ತಷ್ಟು ಓದಿ: ಜಾಗತಿಕ ನಾಯಕರಲ್ಲಿ ನೀವೊಬ್ಬ ಚಾಂಪಿಯನ್; ಪ್ರಧಾನಿ ಮೋದಿಯನ್ನು ಹೊಗಳಿದ ಗಯಾನಾ ಅಧ್ಯಕ್ಷ
ಡೊಮಿನಿಕಾ ಕೂಡ ಈ ಹಿಂದೆ ಪ್ರಧಾನಿ ಮೋದಿಯವರಿಗೆ ತನ್ನ ಅತ್ಯುನ್ನತ ರಾಷ್ಟ್ರೀಯ ಗೌರವ ‘ಡೊಮಿನಿಕಾ ಅವಾರ್ಡ್ ಆಫ್ ಆನರ್’ ನೀಡಿ ಗೌರವಿಸಿತ್ತು. ಗಯಾನಾದಲ್ಲಿ ನಡೆದ ಭಾರತ-ಕ್ಯಾರಿಕಾಮ್ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಅವರನ್ನು ಡೊಮಿನಿಕಾ ಅಧ್ಯಕ್ಷ ಸಿಲ್ವಾನಿ ಬರ್ಟನ್ ಅವರು ಈ ಗೌರವವನ್ನು ಪಡೆದರು. ಫೆಬ್ರವರಿ 2021 ರಲ್ಲಿ, ಪ್ರಧಾನಿ ಮೋದಿ ಅವರು ಡೊಮಿನಿಕಾಗೆ 70 ಸಾವಿರ ಡೋಸ್ ಕೊರೊನಾ ಲಸಿಕೆ ಅಸ್ಟ್ರಾಜೆನೆಕಾವನ್ನು ಪೂರೈಸುವ ಮೂಲಕ ಅಮೂಲ್ಯವಾದ ಉಡುಗೊರೆಯನ್ನು ನೀಡಿದರು. ಪ್ರಧಾನಿ ಮೋದಿಯವರ ಈ ಉದಾರತೆಯನ್ನು ಗುರುತಿಸಿ, ಡೊಮಿನಿಕಾ ಸರ್ಕಾರವು ಅವರಿಗೆ ತನ್ನ ಅತ್ಯುನ್ನತ ನಾಗರಿಕ ಗೌರವವನ್ನು ನೀಡಿ ಗೌರವಿಸಲು ನಿರ್ಧರಿಸಿದೆ.
ಕಳೆದ ಜುಲೈನಲ್ಲಿಯೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ಮೋದಿಯವರಿಗೆ ತಮ್ಮ ದೇಶದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ತಲ್’ ನೀಡಿ ಗೌರವಿಸಿದ್ದರು. ಇದಕ್ಕೂ ಮೊದಲು, ಪ್ರಧಾನಿ ಮೋದಿಯವರಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಕೂಡ ನೀಡಲಾಯಿತು.
ಮೊದಲ ಬಾರಿಗೆ ಭೂತಾನ್ ದೇಶದಲ್ಲದ ವ್ಯಕ್ತಿಗೆ ಈ ಗೌರವವನ್ನು ನೀಡಿದೆ. ಪ್ರಧಾನಿ ಮೋದಿ ಅವರು ಯುನೈಟೆಡ್ ಅರಬ್ ಎಮಿರೇಟ್ಸ್, ಅಫ್ಘಾನಿಸ್ತಾನ, ಬಹ್ರೇನ್ ಮತ್ತು ಸೌದಿ ಅರೇಬಿಯಾ, ಫ್ರಾನ್ಸ್, ಈಜಿಪ್ಟ್, ಫಿಜಿ, ಪಪುವಾ ನ್ಯೂಗಿನಿಯಾ, ಅಮೆರಿಕ, ಮಾಲ್ಡೀವ್ಸ್, ಪ್ಯಾಲೆಸ್ಟೈನ್‌ನಿಂದ ಉನ್ನತ ನಾಗರಿಕ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ