ಭಾರತಕ್ಕೆ ಬಂದ ಗೆಳೆಯ ಪುಟಿನ್ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ ಎರಡು ದಿನಗಳ ರಾಜ್ಯ ಭೇಟಿಗಾಗಿ ಭಾರತದಲ್ಲಿದ್ದಾರೆ. ರಷ್ಯಾದ ನಿಯೋಗವು ವ್ಯಾಪಾರ, ಆರ್ಥಿಕತೆ, ವಿಜ್ಞಾನ, ತಂತ್ರಜ್ಞಾನ ಮತ್ತು ಸಂಸ್ಕೃತಿಯಂತಹ ಕ್ಷೇತ್ರಗಳಲ್ಲಿ ಸಹಕಾರದ ಕುರಿತು ಚರ್ಚೆ ನಡೆಸಲಿದೆ. ಪುಟಿನ್ 23 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಡಿಸೆಂಬರ್ 5 ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪುಟಿನ್ ಭಾಗವಹಿಸಲಿದ್ದಾರೆ.
ನವದೆಹಲಿ, ಡಿಸೆಂಬರ್ 4: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಬಂದಿಳಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪುಟಿನ್ (Putin India Visit) ಅವರನ್ನು ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಿದ್ದಾರೆ. ಹಸ್ತಲಾಘವ ಮತ್ತು ಅಪ್ಪುಗೆ ಮೂಲಕ ಪುಟಿನ್ ಅವರನ್ನು ಸ್ವಾಗತಿಸಿದ ಮೋದಿ ಬಳಿಕ ಏರ್ಪೋರ್ಟ್ನಿಂದ ಹೊರಟರು. ಈ ವೇಳೆ ಇಬ್ಬರೂ ನಾಯಕರು ಒಂದೇ ಕಾರಿನಲ್ಲಿ ಪ್ರಯಾಣ ಮಾಡಿದ್ದು ವಿಶೇಷ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Dec 04, 2025 07:39 PM
