Sign In

By signing in or creating an account, you agree with Associated Broadcasting Company's Terms & Conditions and Privacy Policy.

New Parliament Building: ಹೊಸ ಸಂಸತ್ ಭವನದಲ್ಲಿ 75ರೂ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ, ವಿಡಿಯೋ ನೋಡಿ

New Parliament Building: ಹೊಸ ಸಂಸತ್ ಭವನದಲ್ಲಿ 75ರೂ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ, ವಿಡಿಯೋ ನೋಡಿ

ಆಯೇಷಾ ಬಾನು
|

Updated on: May 28, 2023 | 1:45 PM

ನೂತನ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 75 ರೂನ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ ಮಾಡಿದ್ದಾರೆ. ಈ ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಹಾಗೂ ನಾಣ್ಯದ ಕೆಳಗಡೆ ಸತ್ಯಮೇವ ಜಯತೆ ಎಂದು ಬರೆಯಲಾಗಿದೆ.

ಮೇ 28ರ ಬೆಳಗ್ಗೆ ನೂತನ ಸಂಸತ್ ಭವನ ಉದ್ಘಾಟನೆ(New Parliament Building) ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದ್ದು, ಮಧ್ಯಾಹ್ನದ ನಂತರ 2ನೇ ಹಂತದ ಕಾರ್ಯಕ್ರಮ ರಾಷ್ಟ್ರಗೀತೆ ಮೂಲಕ ಆರಂಭಗೊಂಡಿದೆ. ಇನ್ನು ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು(Narendra Modi) 75 ರೂನ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ ಮಾಡಿದ್ದಾರೆ(Stamp And Rs 75 Coin Released).

75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವಾರ್ಥವಾಗಿ 75ರೂ ನಾಣ್ಯ ಬಿಡುಗಡೆ ಮಾಡಲಾಗಿದೆ. ಈ ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಹಾಗೂ ನಾಣ್ಯದ ಕೆಳಗಡೆ ಸತ್ಯಮೇವ ಜಯತೆ ಎಂದು ಬರೆಯಲಾಗಿದೆ. ಎಡಭಾಗದಲ್ಲಿ ಭಾರತ್, ಬಲ ಭಾಗದಲ್ಲಿ ಇಂಡಿಯಾ ಎಂದು ಬರೆಯಲಾಗಿದೆ. ಸಿಂಹದ ಲಾಂಛನದ ಕೆಳಗಡೆ ಮುಖಬೆಲೆಯನ್ನು ತೋರಿಸುವ ರೂಪಾಯಿ ಚಿಹ್ನೆ ಇರಲಿದ್ದು ₹75 ಎಂದು ಇಂಗ್ಲಿಷ್ ಅಂಕೆಯಲ್ಲಿ ಬರೆಯಲಾಗಿದೆ ಎಂದು ತಿಳಿದು ಬಂದಿದೆ. ನ್ಯಾಣದ ಮತ್ತೊಂದು ಬದಿಯಲ್ಲಿ ಸಂಸತ್​ ಸಂಕೀರ್ಣದ ಫೋಟೋ ಇರಲಿದೆ.