Karnataka Assembly Polls: ಬೆಂಗಳೂರಲ್ಲಿ ಪ್ರಧಾನಿ ಮೋದಿ ರೋಡ್ ಶೋ, ಸಾಂಪ್ರದಾಯಿಕ ನೃತ್ಯಗಳ ಮೂಲಕ ಸ್ವಾಗತಿಸುತ್ತಿರುವ ಯುವತಿಯರು!
ಪ್ರಧಾನಿ ಮೋದಿಯವರ ಜೊತೆ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳ ಸಂಸದರಾದ ತೇಜಸ್ವೀ ಸೂರ್ಯ ಮತ್ತು ಪಿಸಿ ಮೋಹನ್ ಇದ್ದಾರೆ.
ಬೆಂಗಳೂರು: ಬೆಂಗಳೂರಲ್ಲಿ ಅಕ್ಷರಶಃ ಹಬ್ಬದ ವಾತಾವಾರಣ ನಿರ್ಮಾಣವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ರೋಡ್ ಶೋಗೆ ಪ್ರಚಂಡ ಪ್ರತಿಕ್ರಿಯೆ ಸಿಗುತ್ತಿದೆ. ಅವರ ಮೇಲೆ ಹೂಗಳನ್ನು ಎರಚುತ್ತಾ ಜನ ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿಯವರ ರೋಡ್ ಶೋ (roadshow) ಹಾದು ಹೋಗುವ ಕೆಲಭಾಗಗಳಲ್ಲಿ ಯುವತಿಯರು ಸಾಂಪ್ರದಾಯಿಕ ನೃತ್ಯಗಳ (traditional dances) ಮೂಲಕ ಅವರನ್ನು ಸ್ವಾಗತಸುತ್ತಿದ್ದಾರೆ. ಈ ವಿಡಿಯೋದಲ್ಲಿ ನೀವು ಅದನ್ನು ನೋಡಬಹುದು. ವಾಹನದಲ್ಲಿ ಪ್ರಧಾನಿ ಮೋದಿಯವರ ಜೊತೆ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳ ಸಂಸದರಾದ ತೇಜಸ್ವೀ ಸೂರ್ಯ ಮತ್ತು ಪಿಸಿ ಮೋಹನ್ ಇದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos