ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್ ಭೇಟಿಯ ಹೈಲೈಟ್ಸ್ ಇಲ್ಲಿದೆ
3 ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನ್ಯೂಯಾರ್ಕ್ನಲ್ಲಿ ಭಾರತೀಯ ವಲಸಿಗರಿಂದ ಭಾರೀ ಸ್ವಾಗತ ದೊರಕಿದೆ. ಈ ವೇಳೆ ಮೋದಿ ಅವರು ಲಾಂಗ್ ಐಲ್ಯಾಂಡ್‌ನಲ್ಲಿ ಬೃಹತ್ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ತಮ್ಮ ನ್ಯೂಯಾರ್ಕ್ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ನ್ಯೂಯಾರ್ಕ್‌ನ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಲಾಂಗ್ ಐಲ್ಯಾಂಡ್‌ನ ನಸ್ಸೌ ಕೊಲಿಸಿಯಂ ಸ್ಟೇಡಿಯಂನಲ್ಲಿ ನಡೆದ ‘ಮೋದಿ ಮತ್ತು ಯುಎಸ್’ ಕಾರ್ಯಕ್ರಮದಲ್ಲಿ ಹತ್ತಾರು ಸಾವಿರ ಭಾರತೀಯ-ಅಮೆರಿಕನ್ನರು ಭಾಗವಹಿಸಿದ್ದರು. ಈ ವೇಳೆ ಯುನೈಟೆಡ್ ಸ್ಟೇಟ್ಸ್‌ನಲ್ಲಿ ನೆಲೆಸಿರುವ ಭಾರತೀಯರನ್ನು ಭಾರತದ “ಬ್ರಾಂಡ್ ಅಂಬಾಸಿಡರ್‌ಗಳು” ಎಂದು ಕರೆದ ಪ್ರಧಾನಿ ನರೇಂದ್ರ ಮೋದಿ ತಮ್ಮ ಭೇಟಿಯ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ