PM Modi Speech Live: ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ

Updated on: Sep 21, 2025 | 4:34 PM

ಪ್ರಧಾನಿ ನರೇಂದ್ರ ಮೋದಿ ಸುದ್ದಿಗೋಷ್ಠಿ ನೆರಪ್ರಸಾರ: : ಔಷಧಿಗಳು, ಆಟೋಮೊಬೈಲ್‌ ಮತ್ತು ಉಪಕರಣಗಳು ಸೇರಿದಂತೆ ಸುಮಾರು 375 ವಸ್ತುಗಳ ಮೇಲೆ ಹೊಸ ಜಿಎಸ್‌ಟಿ ದರ ನಾಳೆಯಿಂದ(ಸೆ. 22) ಜಾರಿಗೆ ಬರಲಿದೆ. ಈ ಹಿನ್ನೆಲೆ ಅಡುಗೆ ಸಾಮಗ್ರಿಗಳ ಬೆಲೆಗಳು ಸೋಮವಾರದಿಂದ ಅಗ್ಗವಾಗಲಿವೆ. ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿಎಸ್‌ಟಿ ಮಂಡಳಿಯು ನವರಾತ್ರಿಯ ಮೊದಲ ದಿನವಾದ ಸೆಪ್ಟಂಬರ್ 22 ರಿಂದ ಸರಕು ಮತ್ತು ಸೇವೆಗಳ ಮೇಲಿನ ತೆರಿಗೆ ದರಗಳನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಇದು ಗ್ರಾಹಕರಿಗೆ ವರದಾನವಾಗಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದು, ಭಾಷಣದ ನೇರಪ್ರಸಾರ ಇಲ್ಲಿದೆ.

ನವದೆಹಲಿ, (ಸೆಪ್ಟೆಂಬರ್ 21): ಔಷಧಿಗಳು, ಆಟೋಮೊಬೈಲ್‌ ಮತ್ತು ಉಪಕರಣಗಳು ಸೇರಿದಂತೆ ಸುಮಾರು 375 ವಸ್ತುಗಳ ಮೇಲೆ ಹೊಸ ಜಿಎಸ್‌ಟಿ ದರ ನಾಳೆಯಿಂದ(ಸೆ. 22) ಜಾರಿಗೆ ಬರಲಿದೆ. ಈ ಹಿನ್ನೆಲೆ ಅಡುಗೆ ಸಾಮಗ್ರಿಗಳ ಬೆಲೆಗಳು ಸೋಮವಾರದಿಂದ ಅಗ್ಗವಾಗಲಿವೆ. ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿಎಸ್‌ಟಿ ಮಂಡಳಿಯು ನವರಾತ್ರಿಯ ಮೊದಲ ದಿನವಾದ ಸೆಪ್ಟಂಬರ್ 22 ರಿಂದ ಸರಕು ಮತ್ತು ಸೇವೆಗಳ ಮೇಲಿನ ತೆರಿಗೆ ದರಗಳನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಇದು ಗ್ರಾಹಕರಿಗೆ ವರದಾನವಾಗಿದೆ. ಇದರ ಬೆನ್ನಲ್ಲೇ ದೇಶದೆಲ್ಲೆಡೆ ಭಾರೀ ಚರ್ಚೆಯಾಗುತ್ತಿದೆ. ಇದರ ನಡುವೆ  ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದು, ಭಾಷಣದ ನೇರಪ್ರಸಾರ ಇಲ್ಲಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More