Modi in Bengaluru: ಕರ್ನಾಟಕದ ಜನರಿಗೆ ಕೋಟಿ ಪ್ರಣಾಮಗಳು; ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

Modi in Bengaluru: ಕರ್ನಾಟಕದ ಜನರಿಗೆ ಕೋಟಿ ಪ್ರಣಾಮಗಳು; ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

TV9 Web
| Updated By: ಸುಷ್ಮಾ ಚಕ್ರೆ

Updated on:Nov 11, 2022 | 1:42 PM

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಸಮಸ್ತ ಜನರಿಗೆ ನನ್ನ ಕೋಟಿ-ಕೋಟಿ ಪ್ರಣಾಮಗಳು ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದರು.

ಬೆಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್​ (Vande Bharat Express) ರೈಲಿಗೆ ಚಾಲನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Narendra modi) ಬಳಿಕ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಬಳಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಇದಾದ ಬಳಿಕ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಸಮಸ್ತ ಜನರಿಗೆ ನನ್ನ ಕೋಟಿ-ಕೋಟಿ ಪ್ರಣಾಮಗಳು ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದರು. ಈ ವೇಳೆ ಅಲ್ಲಿ ನೆರೆದಿದ್ದ ಜನರು ಸಂತೋಷದಿಂದ ಮೋದಿ ಮೋದಿ ಎಂದು ಜೈಕಾರ ಹಾಕಿದರು.

Published on: Nov 11, 2022 01:40 PM