PM Modi in Karnataka: ಶಿವಮೊಗ್ಗದಲ್ಲೂ ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ!

ಅರುಣ್​ ಕುಮಾರ್​ ಬೆಳ್ಳಿ

Updated on: Feb 27, 2023 | 2:20 PM

ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ, ಪದ್ಯದ ಆರಂಭಿಕ ಸಾಲುಗಳನ್ನು ಹೇಳಿದ ಪ್ರಧಾನಿ ಮೋದಿಯವರು, ನಾಡಿನ ಹೆಮ್ಮೆ ಮತ್ತು ರಾಷ್ಟ್ರಕವಿಯವರ ಹೆಸರು ಹೇಳುತ್ತಾ ಅವರಿಗೆ ವಂದಿಸಿದರು.

ಶಿವಮೊಗ್ಗ: ಶಿವಮೊಗ್ಗದ ನೂತನ ವಿಮಾನ ನಿಲ್ದಾಣ ಉದ್ಘಾಟನೆ ಮತ್ತು ಸಾವಿರಾರು ಕೋಟೊ ರೂಪಾಯಿಗಳ ಅಭಿವೃದ್ಧಿ ಯೋಜನೆಗಳ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎಂದಿನಂತೆ ಇಂದೂ ಸಹ ಕನ್ನಡದಲ್ಲೇ ಭಾಷಣ ಆರಂಭಿಸಿದರು. ಅವರು ಕನ್ನಡದಲ್ಲಿ ಮಾತಾಡಿದಾಗ ನೆರೆದಿದ್ದ ಸಹಸ್ರಾರು ಜನ ಖುಷಿಯಿಂದ ಕೇಕೆ ಹಾಕಿದರು. ಕುವೆಂಪು (Kuvempu) ವಿರಚಿತ ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ, ಪದ್ಯದ ಆರಂಭಿಕ ಸಾಲುಗಳನ್ನು ಹೇಳಿದ ಪ್ರಧಾನಿ ಮೋದಿಯವರು, ನಾಡಿನ ಹೆಮ್ಮೆ ಮತ್ತು ರಾಷ್ಟ್ರಕವಿಯವರ (Rashtrakavi) ಹೆಸರು ಹೇಳುತ್ತಾ ಅವರಿಗೆ ವಂದಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 27, 2023 02:16 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.