ದೆಹಲಿಯ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿ
ದೆಹಲಿಯಲ್ಲಿ ರೇಖಾ ಗುಪ್ತಾ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ, ಈಗಾಗಲೇ ವರದಿಯಾಗಿರುವಂತೆ 27 ವರ್ಷಗಳ ನಂತರ ಪಕ್ಷವು ರಾಷ್ಟ್ರದ ರಾಜಧಾನಿಯಲ್ಲಿ ಸರ್ಕಾರ ರಚಿಸಿದೆ. ಫೆಬ್ರುವರಿ 5ರಂದು ನಡೆದ ಚುನಾವಣೆಯಲ್ಲಿ ದೆಹಲಿ ವಿಧಾನಸಭೆಯ 70 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ತನ್ನದಾಗಿಸಿಕೊಂಡ ಬಿಜೆಪಿ ಹತ್ತು ವರ್ಷಗಳಿಗೂ ಹೆಚ್ಚಿನ ಅವಧಿಯಿಂದ ಅಧಿಕಾರದಲ್ಲಿದ್ದ ಆಪ್ ಸರ್ಕಾರವನ್ನು ಪದಚ್ಯುತಗೊಳಿಸಿತು.
ದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ರೇಖಾ ಗುಪ್ತಾ ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ಪಾಲ್ಗೊಂಡರು. ಪ್ರಧಾನಿ ಮೋದಿ ತಮ್ಮ ಎಂದಿನ ಗಂಭೀರ ನಡಿಗೆಯಲ್ಲಿ ವೇದಿಕೆಯ ಮೇಲಿದ್ದ ಗಣ್ಯರಿಗೆ ವಂದಿಸುತ್ತ ಬರೋದನ್ನು ದೃಶ್ಯಗಳಲ್ಲಿ ನೋಡಬಹುದು. ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಪ್ರಧಾನಿ ಜೋಕ್ ಮಾಡಿದಾಗ ಅವರು ಹೃತ್ಪೂರ್ವಕವಾಗಿ ನಗುತ್ತಾರೆ ಮತ್ತು ಸಂಕೋಚದ ಮುದ್ದೆಯಾಗುತ್ತಾರೆ. ಪ್ರಧಾನಿ ಮೋದಿಯವರು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರೊಂದಿಗೂ ಉಭಯ ಕುಶಲೋಪರಿ ನಡೆಸುತ್ತಾರೆ, ಅವರ ನಡುವಿನ ಮಾತು ಗಂಭೀರ ಸ್ವರೂಪದ್ದಾಗಿರುತ್ತದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ