ಚಿಕ್ಕಬಳ್ಳಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಎರಡು ದಿನ ಮೊದಲು ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ: ಸುಧಾಕರ್

|

Updated on: Apr 16, 2024 | 6:58 PM

ಏಪ್ರಿಲ್ 20 ರಂದು ಪ್ರಧಾನಿ ನರೇಂದ್ರ ಮೋದಿಯವರು ಚಿಕ್ಕಬಳ್ಳಾಪುರ ಮತ್ತು ದೇವನಹಳ್ಳಿ ನಡುವೆ ಇರುವ ಅಲಗುರ್ಕಿ ಬಳಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಜನರನ್ನು ಉದ್ದೇಶಿಸಿ ಮಾತಾಡಲಿದ್ದು ಅವರ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ಮತ್ತು ಲಕ್ಷಾಂತರ ಜನ ಕೂರಲು ಆಸನಗಳ ವ್ಯವಸ್ಥೆ ಸಮರೋಪಾದಿಯಲ್ಲಿ ಮಾಡಲಾಗುತ್ತಿದೆ ಎಂದು ಸುಧಾಕರ್ ಹೇಳಿದರು.

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ (Dr K Sudhakar) ಏಪ್ರಿಲ್ 18 ಸಾಯಂಕಾಲ 5 ಗಂಟೆಗೆ ತೆಲುಗು ಚಿತ್ರರಂಗದ ಖ್ಯಾತ ನಟ ಪವನ್ ಕಲ್ಯಾಣ್ (Pawan Kalyan) ಚಿಕ್ಕಬಳ್ಳಾಪುರದಲ್ಲಿ ತಮ್ಮ ಪರ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದರು. ಪವನ್ ಅವರ ಪಕ್ಷ ಬಿಜೆಪಿ ಜೊತೆ ಮೈತ್ರಿ ಬೆಳೆಸಿರುವುದರಿಂದ ಅವರ ಶೆಡ್ಯೂಲ್ ಮತ್ತು ಕಾರ್ಯಕ್ರಮಗಳು ಕಾಂಗ್ರೆಸ್ ನವರಿಗೆ ಹೇಗೆ ಗೊತ್ತಾಗದು ಸಾಧ್ಯ ಎಂದು ಪತ್ರಕರ್ತರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸುಧಾಕರ್ ಹೇಳಿದರು. ಹಾಗೆಯೇ ಏಪ್ರಿಲ್ 20 ರಂದು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಚಿಕ್ಕಬಳ್ಳಾಪುರ ಮತ್ತು ದೇವನಹಳ್ಳಿ ನಡುವೆ ಇರುವ ಅಲಗುರ್ಕಿ ಬಳಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಜನರನ್ನು ಉದ್ದೇಶಿಸಿ ಮಾತಾಡಲಿದ್ದು ಅವರ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ಮತ್ತು ಲಕ್ಷಾಂತರ ಜನ ಕೂರಲು ಆಸನಗಳ ವ್ಯವಸ್ಥೆ ಸಮರೋಪಾದಿಯಲ್ಲಿ ಮಾಡಲಾಗುತ್ತಿದೆ ಎಂದು ಸುಧಾಕರ್ ಹೇಳಿದರು. ಈ ಭಾಗದ ಜನರೆಲ್ಲ ವಿಶ್ವಗುರುವಿನ ಮಾತು ಕೇಳಲು ಕಾತುರರಾಗಿದ್ದಾರೆ, ಅವರ ಆಗಮನದ ಸುದ್ದಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ ಎಂದು ಮಾಜಿ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: PM Modi in Assam: ಕಾಜಿರಂಗದಲ್ಲಿ ಮೋದಿ ಸಫಾರಿ, ಚಿತ್ರಗಳಲ್ಲಿ ನೋಡಿ ಪ್ರಧಾನಿಯ ಸವಾರಿ!