Loading video

ಮಾರಿಷಸ್ ರಾಷ್ಟ್ರೀಯ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿ; ಪಿಎಂ ನವೀನ್ ರಾಮ್‌ಗೂಲಂ ಘೋಷಣೆ

|

Updated on: Feb 22, 2025 | 4:23 PM

ಮಾರಿಷಸ್‌ನ 57ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 11 ಮತ್ತು 12ರಂದು ಮಾರಿಷಸ್‌ಗೆ ಭೇಟಿ ನೀಡಲಿದ್ದಾರೆ. ನಿನ್ನೆ ಮಾರಿಷಸ್ ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ಮಾರಿಷಸ್ ಪ್ರಧಾನಿ ನವೀನ್ ರಾಮ್‌ಗೂಲಂ ಅವರು ಶೇ. 70ರಷ್ಟು ಭಾರತೀಯ ಮೂಲದ ಜನರನ್ನು ಹೊಂದಿರುವ ದ್ವೀಪ ರಾಷ್ಟ್ರಕ್ಕೆ ಮೋದಿಯವರ ಭೇಟಿಯನ್ನು ಘೋಷಿಸಿದರು.

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಮಾರಿಷಸ್​ನ 57ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾರಿಷಸ್ ಪ್ರಧಾನಿ ನವೀನ್ ರಾಮ್‌ಗೂಲಂ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್ ರಾಷ್ಟ್ರದ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ. “ನನ್ನ ಆಹ್ವಾನದ ಮೇರೆಗೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಮ್ಮ ರಾಷ್ಟ್ರೀಯ ದಿನಾಚರಣೆಯ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲು ಪ್ರೀತಿಯಿಂದ ಒಪ್ಪಿಕೊಂಡಿದ್ದಾರೆ ಎಂದು ಸದನಕ್ಕೆ ತಿಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ” ಎಂದು ರಾಮ್‌ಗೂಲಂ ಹೇಳಿದ್ದಾರೆ.

“ಪ್ರಧಾನಿ ಮೋದಿಯವರ ಬಿಡುವಿಲ್ಲದ ವೇಳಾಪಟ್ಟಿ ಮತ್ತು ಇತ್ತೀಚಿನ ಪ್ಯಾರಿಸ್ ಮತ್ತು ಅಮೆರಿಕ ಭೇಟಿಗಳ ನಡುವೆಯೂ ನಮ್ಮ ಗೌರವವನ್ನು ಸ್ವೀಕರಿಸಿ, ದೇಶಕ್ಕೆ ಆಗಮಿಸುತ್ತಿರುವುದು ನಮ್ಮ ದೇಶಕ್ಕೆ ನಿಜಕ್ಕೂ ಒಂದು ಸೌಭಾಗ್ಯ. ಮೋದಿಯವರ ಭೇಟಿ ನಮ್ಮ ಎರಡೂ ರಾಷ್ಟ್ರಗಳ ನಡುವಿನ ನಿಕಟ ಸಂಬಂಧಕ್ಕೆ ಸಾಕ್ಷಿಯಾಗಿದೆ” ಎಂದು ಮಾರಿಷಸ್ ಪ್ರಧಾನಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ