AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Live Video: ರಾಮಮಂದಿರದ ಉದ್ಘಾಟನೆ, ಕೇಸರಿ ಧ್ವಜ ಪ್ರತಿಷ್ಠಾಪನೆಯ ನೇರ ಪ್ರಸಾರ

Live Video: ರಾಮಮಂದಿರದ ಉದ್ಘಾಟನೆ, ಕೇಸರಿ ಧ್ವಜ ಪ್ರತಿಷ್ಠಾಪನೆಯ ನೇರ ಪ್ರಸಾರ

ನಯನಾ ರಾಜೀವ್
|

Updated on:Nov 25, 2025 | 10:39 AM

Share

ಹಲವು ವಿವಾದಗಳ ಬಲೆಗಳಲ್ಲಿ ಸಿಲುಕಿ ಹೊರಬಂದು ಭವ್ಯ ರಾಮ ಮಂದಿರ ಇಂದು ತಲೆ ಎತ್ತಿ ನಿಂತಿದೆ. ಇಂದು 11.52ರಿಂದ 12.35ರ ಶುಭ ಮುಹೂರ್ತದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯುತ್ತಿದೆ. 191 ಅಡಿ ಎತ್ತರದ ರಾಮ ಮಂದಿರದ ಮೇಲ್ಭಾಗದಲ್ಲಿ 11 ಅಡಿ ಅಗಲ ಮತ್ತು 22 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜವನ್ನು ಹಾರಿಸಲಾಗುತ್ತಿದೆ. ದ್ವಜದ ಮೇಲೆ ಸೂರ್ಯವಂಶಿ ಮತ್ತು ತ್ರೇತಾಯುಗದ ಚಿಹ್ನೆಗಳನ್ನು ಇರಿಸಲಾಗಿದೆ. ರಾಮ ಮಂದಿರದ ಮೇಲೆ ಹಾರಲಿರುವ ಧ್ವಜ ತುಂಬಾ ವಿಶೇಷವಾಗಿದ್ದು, ದೈವಿಕ ಧ್ವಜವನ್ನು ಗುಜರಾತ್‌ನ ಅಹಮದಾಬಾದ್‌ನಲ್ಲಿ ತಯಾರಿಸಲಾಗಿದೆ.

ಅಯೋಧ್ಯೆ, ನವೆಂಬರ್ 25: ಹಲವು ವಿವಾದಗಳ  ಸುಳಿಯಲ್ಲಿ ಸಿಲುಕಿ ಹೊರಬಂದು ಭವ್ಯ ರಾಮ ಮಂದಿರ(Ram Mandir) ಇಂದು ತಲೆ ಎತ್ತಿ ನಿಂತಿದೆ. ಇಂದು 11.52ರಿಂದ 12.35ರ ಶುಭ ಮುಹೂರ್ತದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯುತ್ತಿದೆ. 191 ಅಡಿ ಎತ್ತರದ ರಾಮ ಮಂದಿರದ ಮೇಲ್ಭಾಗದಲ್ಲಿ 11 ಅಡಿ ಅಗಲ ಮತ್ತು 22 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜವನ್ನು ಹಾರಿಸಲಾಗುತ್ತಿದೆ. ದ್ವಜದ ಮೇಲೆ ಸೂರ್ಯವಂಶಿ ಮತ್ತು ತ್ರೇತಾಯುಗದ ಚಿಹ್ನೆಗಳನ್ನು ಇರಿಸಲಾಗಿದೆ. ರಾಮ ಮಂದಿರದ ಮೇಲೆ ಹಾರಲಿರುವ ಧ್ವಜ ತುಂಬಾ ವಿಶೇಷವಾಗಿದ್ದು, ದೈವಿಕ ಧ್ವಜವನ್ನು ಗುಜರಾತ್‌ನ ಅಹಮದಾಬಾದ್‌ನಲ್ಲಿ ತಯಾರಿಸಲಾಗಿದೆ.

ಅಯೋಧ್ಯೆ ರಾಮ ಮಂದಿರದ ಧಾರ್ಮಿಕ ಧ್ವಜದಲ್ಲಿರುವ ಚಿಹ್ನೆಗಳಿಗೆ ಪ್ರತಿಯೊಂದಕ್ಕೂ ವಿಶೇಷ ಅರ್ಥವಿದೆ. ಕೇಸರಿ ಬಣ್ಣದ ಧ್ವಜ, ಸೂರ್ಯ ದೇವರು ಮತ್ತು ಓಂ ಚಿಹ್ನೆ ಹೊಂದಿದೆ.ಧಾರ್ಮಿಕ ಮಹತ್ವವುಳ್ಳ ವಿಶಿಷ್ಟವಾದ ಮರದ ಚಿತ್ರವನ್ನು ಸಹ ಧ್ವಜದ ಮೇಲೆ ಚಿತ್ರಿಸಲಾಗಿದೆ.ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಭಾರತದ ವಿವಿಧೆಡೆಯ ಆರು ಸಾವಿರ ಪ್ರಮುಖ ಗಣ್ಯರು ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Nov 25, 2025 10:12 AM