Bengaluru-Mysuru Highway: ಮಾರ್ಚ್ 12 ರಂದು ಧಶಪಥ ಹೆದ್ದಾರಿ ಲೋಕಾರ್ಪಣೆ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ

Arun Kumar Belly

|

Updated on: Mar 08, 2023 | 6:02 PM

ಪ್ರಧಾನಿ ಮೋದಿಯವರು ಸಕ್ಕರೆ ನಾಡಿಗೆ ಆಗಮಿಸುವ ಸಮಯದ ಬಗ್ಗೆ ಪ್ರಧಾನ ಮಂತ್ರಿಗಳ ಕಚೇರಿಯಿಂದ ಇನ್ನೂ ಸೂಚನೆ ಬಂದಿಲ್ಲ, ಬೆಳಗ್ಗೆ 11.15 ಕ್ಕೆ ಆಗಮಿಸಬಹುದೆಂಬ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಮಂಡ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮಾರ್ಚ್ 12 ರಂದು ಬೆಂಗಳೂರು-ಮೈಸೂರು ನಡುವಿನ ಹತ್ತು ಪಥಗಳ ರಾಷ್ಟ್ರೀಯ ಹೆದ್ದಾರಿಯನ್ನು (National Highway) ಉದ್ಘಾಟಿಸಲು ಪ್ರಧಾನಿ ಮೋದಿ ಬರುವುದು ನಿಗದಿಯಾಗಿದೆ. ಪ್ರಧಾನಿಗಳ ಭೇಟಿ ಮತ್ತು ಕಾರ್ಯಕ್ರಮದ ವ್ಯವಸ್ಥೆ ಕುರಿತು ಮಾಧ್ಯಮಗಳಿಗೆ ವಿವರಣೆ ನೀಡಿದ ಮಂಡ್ಯ ಜಿಲ್ಲಾಧಿಕಾರಿ ಡಾ ಹೆಚ್ ಎನ್ ಗೋಪಾಲಕೃಷ್ಣ (HN Gopalakrishnan), ಪ್ರಧಾನಿ ಮೋದಿಯವರು ಸಕ್ಕರೆ ನಾಡಿಗೆ ಆಗಮಿಸುವ ಸಮಯದ ಬಗ್ಗೆ ಪ್ರಧಾನ ಮಂತ್ರಿಗಳ ಕಚೇರಿಯಿಂದ ಇನ್ನೂ ಸೂಚನೆ ಬಂದಿಲ್ಲ, ಬೆಳಗ್ಗೆ 11.15 ಕ್ಕೆ ಆಗಮಿಸಬಹುದೆಂಬ ನಿರೀಕ್ಷೆ ಇದೆ ಎಂದು ಹೇಳಿದರು. ಪ್ರಧಾನಿಯವರ ಕಾರ್ಯಕ್ರಮಕ್ಕೆ ಒಂದೂವರೆ-ಎರಡು ಲಕ್ಷ ಜನ ಸೇರುವ ನಿರೀಕ್ಷೆಯಿದ್ದು ಊಟ ಮತ್ತು ಇನ್ನಿತರ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಸುಮಾರು 2,000 ಬಸ್ ಮತ್ತು ಇತರ ವಾಹನಗಳ ಪಾರ್ಕಿಂಗ್ ಗಾಗಿ 50-60 ಎಕರೆ ಬಯಲು ಪ್ರದೇಶ ಗೊತ್ತು ಮಾಡಲಾಗಿದೆ ಎಂದು ಗೋಪಾಲಕೃಷ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on

Click on your DTH Provider to Add TV9 Kannada