ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ: ಏನೆಲ್ಲಾ ಕಾರ್ಯಕ್ರಮ ಇದೆ ಗೊತ್ತಾ?
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ನವೆಂಬರ್ 28) ಉಡುಪಿಗೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ 11.30 ರೋಡ್ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಆ ಬಳಿಕ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ, ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಬೇಕಾದ ಸಿದ್ಧತೆ ಅಂತಿಮವಾಗಿದೆ. ಇನ್ನು ಇದೇ ವೇಳೆ ಅನಂತ ಪದ್ಮನಾಭ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಇನ್ನು ಈ ಅನಂತ ಪದ್ಮನಾಭ ಪ್ರತಿಮೆ ಹೇಗಿದೆ ಎನ್ನುವುದನ್ನು ದೃಶ್ಯದಲ್ಲಿ ನೋಡಿ.
ಉಡುಪಿ, (ನವೆಂಬರ್ 27): ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ನವೆಂಬರ್ 28) ಉಡುಪಿಗೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ 11.30 ರೋಡ್ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಆ ಬಳಿಕ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ, ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಬೇಕಾದ ಸಿದ್ಧತೆ ಅಂತಿಮವಾಗಿದೆ. ಇನ್ನು ಇದೇ ವೇಳೆ ಅನಂತ ಪದ್ಮನಾಭ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಇನ್ನು ಈ ಅನಂತ ಪದ್ಮನಾಭ ಪ್ರತಿಮೆ ಹೇಗಿದೆ ಎನ್ನುವುದನ್ನು ದೃಶ್ಯದಲ್ಲಿ ನೋಡಿ.
