ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರು-ಮೈಸೂರು ಹೆದ್ದಾರಿಯ ನಂತರ ಬಳಿಕ ಧಾರವಾಡದ ಐಐಟಿ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ
ಧಾರವಾಡದ ಐಐಟಿ ಕಟ್ಟಡಗಳನ್ನು ರೂ. 850 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು ನಾಳಿನ ಕಾರ್ಯಕ್ರಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ನಾಳೆ ಮಂಡ್ಯದ ಮದ್ದೂರಲ್ಲಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು (Bengaluru-Mysuru NH) ಲೋಕಾರ್ಪಣೆ ಮಾಡಿದ ನಂತರ ಹುಬ್ಬಳ್ಳಿಗೆ ತೆರಳಿ ಧಾರವಾಡದಲ್ಲಿ ನಿರ್ಮಿಸಲಾಗಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (Indian Institute of Technology, Dharwad) ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಧಾರವಾಡ ಐಐಟಿ ಕಟ್ಟಡಗಳನ್ನು ರೂ. 850 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು ನಾಳಿನ ಕಾರ್ಯಕ್ರಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕಟ್ಟಡ ಮತ್ತು ಕಾರ್ಯಕ್ರಮದ ಬಗ್ಗೆ ಒಂದು ವಾಕ್ ಥ್ರೂ ಮಾಡಿರುವ ಟಿವಿ9 ಕನ್ನಡ ವಾಹಿನಿ ಧಾರವಾಡ ಪ್ರತಿನಿಧಿ ಹೇಳುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ