AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 10ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಏನು ವಿಶೇಷ?

ಮೇ 10ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಏನು ವಿಶೇಷ?

ಪ್ರಸನ್ನ ಗಾಂವ್ಕರ್​
| Edited By: |

Updated on: May 06, 2026 | 7:52 PM

Share

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಈ ಕುರಿತು ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ಜಯದ ಹಿನ್ನೆಲೆಯಲ್ಲಿ ಮೋದಿ ಅವರಿಗೆ ಭವ್ಯ ಸ್ವಾಗತ ಕೋರಲು ಸಿದ್ಧತೆ ನಡೆದಿದೆ. HAL ಏರ್‌ಪೋರ್ಟ್‌ನಲ್ಲಿ 10-15 ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ.

ಬೆಂಗಳೂರು, ಮೇ 10: ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಅಧಿಕಾರ ಹಾಗೂ ಕೇರಳ ರಾಜ್ಯದ ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಹಿನ್ನೆಲೆ HAL ಏರ್​ಪೋರ್ಟ್ ಪ್ರವೇಶದ್ವಾರ ಬಳಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 10ರಂದು ಬೆಳಿಗ್ಗೆ 9 ಗಂಟೆಗೆ ಮೋದಿ ಅವರು HAL ಏರ್‌ಪೋರ್ಟ್‌ಗೆ ಆಗಮಿಸಲಿದ್ದು, ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇನ್ನು ಕಾರ್ಯಕ್ರಮಕ್ಕೆ ಸುಮಾರು 10ರಿಂದ 15 ಸಾವಿರ ಜನರು ಸೇರುವ ನಿರೀಕ್ಷೆಯಿದೆ. ಇದೊಂದು ಸಂಪೂರ್ಣ ಬಿಜೆಪಿ ಕಾರ್ಯಕ್ರಮವಾಗಿದ್ದು, ನಂತರ ಅವರು ರವಿಶಂಕರ್ ಗುರೂಜಿ ಆಶ್ರಮದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಆರ್​​. ಅಶೋಕ್ ಮಾಹಿತಿ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us