PM Narendra Modi: ಮಧ್ಯ ಪ್ರದೇಶ, ಕೇರಳ ಮತ್ತು ನಾಗರಹವೇಲಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಏಪ್ರಿಲ್ 24ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 11.30ಕ್ಕೆ ಮಧ್ಯಪ್ರದೇಶದ ರೇವಾ ತಲುಪಲಿದ್ದು ಅಲ್ಲಿ ರಾಷ್ಟ್ರೀಯ ಪಂಚಾಯತಿ ರಾಜ್ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿ ಅವರು ₹17,000 ಕೋಟಿಯಷ್ಟು ಮೊತ್ತದ ಯೋಜನೆಗೆ ಶಂಕು ಸ್ಥಾಪನೆ ಮಾಡಲಿದ್ದು, ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.
ಪ್ರಧಾನಿ ಮೋದಿಯವರ ಕಾರ್ಯಕ್ರಮವೆಂದರೆ ಹಾಗೆಯೇ.. ಒಂದು ನಿಮಿಷವೂ ವ್ಯರ್ಥವಾಗದಂತೆ ಅವರು ದಿನಪೂರ್ತಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಏಪ್ರಿಲ್ 24ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 11.30ಕ್ಕೆ ಮಧ್ಯಪ್ರದೇಶದ ರೇವಾ ತಲುಪಲಿದ್ದು ಅಲ್ಲಿ ರಾಷ್ಟ್ರೀಯ ಪಂಚಾಯತಿ ರಾಜ್ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿ ಅವರು ₹17,000 ಕೋಟಿಯಷ್ಟು ಮೊತ್ತದ ಯೋಜನೆಗೆ ಶಂಕು ಸ್ಥಾಪನೆ ಮಾಡಲಿದ್ದು, ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಏಪ್ರಿಲ್ 25ರಂದು ಬೆಳಗ್ಗೆ 10.30ಕ್ಕೆ ಅವರು ಕೇರಳದ ರಾಜಧಾನಿ ತಿರುವನಂತಪುರಂ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ಗೆ ಚಾಲನೆ ನೀಡಲಿದ್ದಾರೆ. ಸುಮಾರು 11 ಗಂಟೆಯ ಹೊತ್ತಿಗೆ ಅಲ್ಲಿನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 3200 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ಮಾಡಲಿದ್ದಾರೆ. ಸಂಜೆ 4ಗಂಟೆಗೆ ಅವರು ದಾದರ್ ಮತ್ತು ನಾಗರ್ ಹವೇಲಿಗೆ ಭೇಟಿ ನೀಡಲಿದ್ದು ಅಲ್ಲಿ ನಮೋ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ಇನ್ಸಿಟ್ಯೂಟ್ ಗೆ ಭೇಟಿ ನೀಡಲಿದ್ದಾರೆ. ಸಿಲ್ವಾಸಾದಲ್ಲಿ 4850 ಕೋಟಿಗಿಂತಲೂ ಹೆಚ್ಚು ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಶಂಕು ಸ್ಥಾಪನೆ ಮಾಡಲಿದ್ದಾರೆ. ನಂತರ, ಸಂಜೆ 6 ಗಂಟೆ ಸುಮಾರಿಗೆ, ಪ್ರಧಾನಮಂತ್ರಿಯವರು ದಮನ್‌ನಲ್ಲಿ ದೇವಕಾ ಸೀಫ್ರಂಟ್ ಅನ್ನು ಉದ್ಘಾಟಿಸಲಿದ್ದಾರೆ.