ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: 115 ಕೋಟಿ ವೆಚ್ಚದ ತಾರಾಲಯ ಉದ್ಘಾಟನೆ
ನವೆಂಬರ್ 13ರಂದು ಮೈಸೂರಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ, ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ 115 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ದೇಶದ ಮೊದಲ ಡೋಮ್ ಸ್ಕ್ರೀನ್ ಎಲ್ಇಡಿ ತಾರಾಲಯವನ್ನು ಉದ್ಘಾಟಿಸಲಿದ್ದಾರೆ. ಬೆಂಗಳೂರಿನಲ್ಲಿ ಪಿಂಕ್ ಲೈನ್ ಉದ್ಘಾಟನೆ ಬಳಿಕ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ ಎಂದು ಸಂಸದ ಯದುವೀರ್ ಒಡೆಯರ್ ಮಾಹಿತಿ ನೀಡಿದ್ದಾರೆ.
ಮೈಸೂರು, ನವೆಂಬರ್ 09: ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಮುಂಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಿರುವ ಡೋಮ್ ಸ್ಕ್ರೀನ್ ಎಲ್ಇಡಿ ಮಾದರಿಯ ಮೊದಲ ತಾರಾಲಯ ಉದ್ಘಾಟಿಸಲಿದ್ದಾರೆ ಎಂದು ಸಂಸದ ಯದುವೀರ್ ಒಡೆಯರ್ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳು ತರಬೇತಿ ಪಡೆಯಲು ಈ ತಾರಾಲಯ ಅನುಕೂಲವಾಗಲಿದೆ ಎಂದವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪಿಂಕ್ ಲೈನ್ ಉದ್ಘಾಟನೆ ಬಳಿಕ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಿಯಾವಾಕಿ ಅರಣ್ಯ ಮತ್ತು 115 ಕೋಟಿ ವೆಚ್ಚದ ತಾರಾಲಯ ಉದ್ಘಾಟಿಸಲಿದ್ದಾರೆ ಎಂದು ಸಂಸದರು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

