ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: 115 ಕೋಟಿ ವೆಚ್ಚದ ತಾರಾಲಯ ಉದ್ಘಾಟನೆ

Edited By:

Updated on: Nov 09, 2026 | 12:36 PM

ನವೆಂಬರ್ 13ರಂದು ಮೈಸೂರಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ, ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ 115 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ದೇಶದ ಮೊದಲ ಡೋಮ್ ಸ್ಕ್ರೀನ್ ಎಲ್‌ಇಡಿ ತಾರಾಲಯವನ್ನು ಉದ್ಘಾಟಿಸಲಿದ್ದಾರೆ. ಬೆಂಗಳೂರಿನಲ್ಲಿ ಪಿಂಕ್​​ ಲೈನ್​​ ಉದ್ಘಾಟನೆ ಬಳಿಕ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ ಎಂದು ಸಂಸದ ಯದುವೀರ್​​ ಒಡೆಯರ್​​ ಮಾಹಿತಿ ನೀಡಿದ್ದಾರೆ.

ಮೈಸೂರು, ನವೆಂಬರ್​​ 09: ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಮುಂಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಿರುವ ಡೋಮ್ ಸ್ಕ್ರೀನ್ ಎಲ್​ಇಡಿ ಮಾದರಿಯ ಮೊದಲ ತಾರಾಲಯ ಉದ್ಘಾಟಿಸಲಿದ್ದಾರೆ ಎಂದು ಸಂಸದ ಯದುವೀರ್​​ ಒಡೆಯರ್​​ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳು ತರಬೇತಿ ಪಡೆಯಲು ಈ ತಾರಾಲಯ ಅನುಕೂಲವಾಗಲಿದೆ ಎಂದವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪಿಂಕ್​​ ಲೈನ್​​ ಉದ್ಘಾಟನೆ ಬಳಿಕ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಿಯಾವಾಕಿ ಅರಣ್ಯ ಮತ್ತು 115 ಕೋಟಿ ವೆಚ್ಚದ ತಾರಾಲಯ ಉದ್ಘಾಟಿಸಲಿದ್ದಾರೆ ಎಂದು ಸಂಸದರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More