PM Narendra Modi to visit Karnataka: ಫೆಬ್ರುವರಿ 6 ರಂದು ತುಮಕೂರಿಗೆ ಆಗಮಿಸಲಿರುವ ಪ್ರಧಾನಿ, ತಿಂಗಳ ಅವಧಿಯಲ್ಲಿ ಮೂರನೇ ಭೇಟಿ!
ಪ್ರಧಾನಿ ಬರುತ್ತಿರುವುದು ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಹೌದಾದರೂ ಅವರನ್ನು ಕರೆಸುತ್ತಿರುವ ಪ್ರಮುಖ ಉದ್ದೇಶ 2-3 ತಿಂಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಾಗಿದೆ.
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಮತ್ತೊಮ್ಮೆ ಕರ್ನಾಟಕ ಆಗಮಿಸಲಿರುವುದು ಖಚಿತವಾಗಿದೆ. ಫೆಬ್ರುವರಿ 6 ರಂದು ತುಮಕೂರು (Tumakuru) ಜಿಲ್ಲೆ ನಿಟ್ಟೂರಿನಲ್ಲಿ ಸ್ಥಾಪಿಸಲಾಗಿರುವ ಹೆಚ್ ಎ ಎಲ್ ಹೆಲಿಕಾಪ್ಟರ್ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ಮೋದಿ ಅಗಮಿಸಲಿದ್ದು ಒಂದು ತಿಂಗಳ ಅವಧಿಯಲ್ಲಿ ಇದು ಅವರ ಮೂರನೇ ಭೇಟಿಯಾಗಲಿದೆ. ಅದಾದ ಬಳಿಕ ಪ್ರಧಾನಿ ಮೋದಿ ಅವರು ಜಲಜೀವನ್ ಮಿಶನ್ ನ (Jal Jeevan Mission) ಶಿಲಾನ್ಯಾಸದ ಜೊತೆಗೆ ಇತರ ಅಭಿವೃದ್ಧಿ ಕಾರ್ಯಗಳನ್ನೂ ಉದ್ಘಾಟಿಸಲಿದ್ದಾರೆ. ಪ್ರಧಾನಿ ಬರುತ್ತಿರುವುದು ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಹೌದಾದರೂ ಅವರನ್ನು ಕರೆಸುತ್ತಿರುವ ಪ್ರಮುಖ ಉದ್ದೇಶ 2-3 ತಿಂಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 31, 2023 05:43 PM
Follow Us
Latest Videos
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
