PM Narendra Modi to visit Karnataka: ಫೆಬ್ರುವರಿ 6 ರಂದು ತುಮಕೂರಿಗೆ ಆಗಮಿಸಲಿರುವ ಪ್ರಧಾನಿ, ತಿಂಗಳ ಅವಧಿಯಲ್ಲಿ ಮೂರನೇ ಭೇಟಿ!

ಅರುಣ್​ ಕುಮಾರ್​ ಬೆಳ್ಳಿ

Updated on: Jan 31, 2023 | 5:44 PM

ಪ್ರಧಾನಿ ಬರುತ್ತಿರುವುದು ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಹೌದಾದರೂ ಅವರನ್ನು ಕರೆಸುತ್ತಿರುವ ಪ್ರಮುಖ ಉದ್ದೇಶ 2-3 ತಿಂಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಾಗಿದೆ.

ಬೆಂಗಳೂರು:  ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಮತ್ತೊಮ್ಮೆ ಕರ್ನಾಟಕ ಆಗಮಿಸಲಿರುವುದು ಖಚಿತವಾಗಿದೆ. ಫೆಬ್ರುವರಿ 6 ರಂದು ತುಮಕೂರು (Tumakuru) ಜಿಲ್ಲೆ ನಿಟ್ಟೂರಿನಲ್ಲಿ ಸ್ಥಾಪಿಸಲಾಗಿರುವ ಹೆಚ್ ಎ ಎಲ್ ಹೆಲಿಕಾಪ್ಟರ್ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ಮೋದಿ ಅಗಮಿಸಲಿದ್ದು ಒಂದು ತಿಂಗಳ ಅವಧಿಯಲ್ಲಿ ಇದು ಅವರ ಮೂರನೇ ಭೇಟಿಯಾಗಲಿದೆ. ಅದಾದ ಬಳಿಕ ಪ್ರಧಾನಿ ಮೋದಿ ಅವರು ಜಲಜೀವನ್ ಮಿಶನ್ ನ (Jal Jeevan Mission) ಶಿಲಾನ್ಯಾಸದ ಜೊತೆಗೆ ಇತರ ಅಭಿವೃದ್ಧಿ ಕಾರ್ಯಗಳನ್ನೂ ಉದ್ಘಾಟಿಸಲಿದ್ದಾರೆ. ಪ್ರಧಾನಿ ಬರುತ್ತಿರುವುದು ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಹೌದಾದರೂ ಅವರನ್ನು ಕರೆಸುತ್ತಿರುವ ಪ್ರಮುಖ ಉದ್ದೇಶ 2-3 ತಿಂಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 31, 2023 05:43 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.