ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಸಿಎಂ, ಡಿಸಿಎಂ ಸಾಥ್
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಹೊಸ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಿದರು. ರಾಗಿಗುಡ್ಡದಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಅವರು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಾಥ್ ನೀಡಿದರು.
ಬೆಂಗಳೂರು, ಆಗಸ್ಟ್ 10: ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಿದರು. ಬಳಿಕ ರಾಗಿಗುಡ್ಡ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿ ನಿಲ್ದಾಣವರೆಗೆ ಪ್ರಯಾಣ ಬೆಳೆಸಿದರು. ಈ ವೇಳೆ ಮೆಟ್ರೋದಲ್ಲಿ ವಿದ್ಯಾರ್ಥಿಗಳ ಜತೆ ಸಂವಾದ ಮಾಡಿದರು. ಪ್ರಧಾನಿ ಮೋದಿಯೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾದ ಮನೋಹರ್ ಲಾಲ್ ಖಟ್ಟರ್, ವಿ.ಸೋಮಣ್ಣ, ಸಂಸದರಾದ ಡಾ.ಮಂಜುನಾಥ್ ಮತ್ತು ತೇಜಸ್ವಿ ಸೂರ್ಯ ಸಹ ಪ್ರಯಾಣ ಮಾಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 10, 2025 01:19 PM
Latest Videos

