ತೇಜಸ್ ಯುದ್ಧ ವಿಮಾನದಲ್ಲಿ ಪ್ರಧಾನಿ ಮೋದಿ ಸಂಚಾರ: ವಿಡಿಯೋ ನೋಡಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್ ಏರಿ ಹೊಸ ಅನುಭವ ಪಡೆದುಕೊಂಡಿದ್ದಾರೆ. ಬೆಂಗಳೂರು ಮೂಲದ ರಕ್ಷಣಾ ಪಿಎಸ್‌ಯು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ಗೆ ಭೇಟಿ ನೀಡಿದ್ದು ಪ್ರಧಾನಿ ಮೋದಿ, ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಿದ್ದಾರೆ.
ಬೆಂಗಳೂರು, ನವೆಂಬರ್ 25: ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡಿದ್ದು, ನಗರದ ಹೆಚ್ಎಎಲ್ನಲ್ಲಿ ರಕ್ಷಣಾ ಇಲಾಖೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಳಿಕ ತೇಜಸ್ ವಿಮಾನ ಏರಿ ಹೊಸ ಅನುಭವ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಸುಮಾರು 45 ನಿಮಿಷಗಳ ಕಾಲ ಹಾರಾಟ ನಡೆಸಿದ್ದಾರೆ. ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ರಾಷ್ಟ್ರದ ಸಾಮರ್ಥ್ಯದ ಬಗ್ಗೆ ಹೊಸ ಹೆಮ್ಮೆ ಮೂಡಿಸಿದೆ. ಸ್ವಾವಲಂಬನೆ ಕ್ಷೇತ್ರದಲ್ಲಿ ಯಾರಿಗಿಂತ ಕಡಿಮೆಯಿಲ್ಲ. ತೇಜಸ್ನಲ್ಲಿ ಯಶಸ್ವಿಯಾಗಿ ಹಾರಾಟ ಮುಗಿಸಿದ್ದೇನೆ. ಇದೊಂದು ಅತ್ಯದ್ಭುತ ಅನುಭವ ದೇಶೀಯ ಯುದ್ಧ ವಿಮಾನಗಳಲ್ಲಿ ವಿಶ್ವಾಸ ಹೆಚ್ಚಿದೆ. ರಾಷ್ಟ್ರದ ಸಾಮರ್ಥ್ಯದ ಬಗ್ಗೆ ಹೊಸ ಹೆಮ್ಮೆ ಮೂಡಿಸಿದೆ. ಸ್ವಾವಲಂಬನೆ ಕ್ಷೇತ್ರದಲ್ಲಿ ಯಾರಿಗಿಂತ ಕಡಿಮೆಯಿಲ್ಲ ಎಂದು ಅಪಾರ ಹೆಮ್ಮೆಯಿಂದ ಹೇಳಬಲ್ಲೆ. ಭಾರತೀಯ ವಾಯುಪಡೆ ಡಿಆರ್ಡಿಒ, ಹೆಚ್ಎಎಲ್ ಹಾಗೂ ಎಲ್ಲಾ ಭಾರತೀಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.