ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ

ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ

ಸುಷ್ಮಾ ಚಕ್ರೆ
|

Updated on:Oct 05, 2024 | 4:10 PM

ಮಹಾರಾಷ್ಟ್ರದ ವಾಶಿಮ್‌ಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಬಂಜಾರ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವನ್ನು ಹೊಂದಿರುವ ಡೋಲನ್ನು ಬಾರಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ನಂಗಾರಾ ಸಂಸ್ಕೃತಿಯನ್ನು ಇನ್ನಷ್ಟು ಜನಪ್ರಿಯಗೊಳಿಸಲು ನಮ್ಮ ಸರ್ಕಾರ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ ಎಂದು ಮೋದಿ ಹೇಳಿದ್ದಾರೆ.

ಮುಂಬೈ: ಮಹಾರಾಷ್ಟ್ರದ ವಾಶಿಮ್​ನಲ್ಲಿನ ಜಗದಾಂಬಾ ಮಾತಾ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಂಪ್ರದಾಯಿಕ ಡೋಲು ಬಾರಿಸುವ ಮೂಲಕ ಗಮನ ಸೆಳೆದಿದ್ದಾರೆ. ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸುವಲ್ಲಿ ಬಂಜಾರ ಸಮುದಾಯವು ಮಹತ್ವದ ಪಾತ್ರವನ್ನು ವಹಿಸಿದೆ. ಕಲೆ, ಸಂಪ್ರದಾಯ, ಆಧ್ಯಾತ್ಮಿಕತೆ, ವ್ಯಾಪಾರ, ವಾಣಿಜ್ಯ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ಬಂಜಾರ ಸಮುದಾಯದವರು ಅಪಾರ ಕೊಡುಗೆ ನೀಡಿದ್ದಾರೆ. ಬಂಜಾರ ಹೆರಿಟೇಜ್ ಮ್ಯೂಸಿಯಂಗಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ. ಈ ಸಮುದಾಯವು ಭಾರತದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಉಳಿಸಿ ಮತ್ತು ಹೆಚ್ಚಿಸುತ್ತಿದೆ ”ಎಂದು ಮೋದಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 05, 2024 04:09 PM