ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ಯುವತಿಯರ ಗಾಯನಕ್ಕೆ ಮೆಚ್ಚುಗೆ

Updated on: Apr 14, 2026 | 5:06 PM

ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಡೆಹ್ರಾಡೂನ್​ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ದೇಶದ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ದೇವಾಲಯದಲ್ಲಿ ಸಮಯ ಕಳೆದರು. ಪ್ರಧಾನಿ ಮೋದಿ ಭೇಟಿಗಾಗಿ ದೇವಾಲಯವನ್ನು ಹೂವುಗಳಿಂದ ಅಲಂಕರಿಸಲಾಗಿತ್ತು. ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಗಡಿಯಲ್ಲಿರುವ ಈ ಸುಮಾರು 200 ವರ್ಷಗಳಷ್ಟು ಹಳೆಯದಾದ ದೇವಾಲಯ ಕಾಳಿ ದೇವಿಗೆ ಅರ್ಪಿತವಾಗಿದೆ.

ಡೆಹ್ರಾಡೂನ್, ಏಪ್ರಿಲ್ 14: ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇಶದ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ದೇವಾಲಯದಲ್ಲಿ ಸಮಯ ಕಳೆದರು.

ಪ್ರಧಾನಿ ಮೋದಿ ಭೇಟಿಗಾಗಿ ದೇವಾಲಯವನ್ನು ಹೂವುಗಳಿಂದ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ದೇವಾಲಯದ ಎದುರು ಯುವತಿಯರು ಅಯಿಗಿರಿ ನಂದಿನಿ ಭಕ್ತಿಗೀತೆಯನ್ನು ಹಾಡಿದರು. ಈ ಹಾಡನ್ನು ಕೇಳುತ್ತಾ ತಲ್ಲೀನರಾಗಿ ನಿಂತ ಮೋದಿ ಮೆಚ್ಚುಗೆ ಸೂಚಿಸಿದರು. ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಗಡಿಯಲ್ಲಿರುವ ಈ ಸುಮಾರು 200 ವರ್ಷಗಳಷ್ಟು ಹಳೆಯದಾದ ದೇವಾಲಯ ಕಾಳಿ ದೇವಿಗೆ ಅರ್ಪಿತವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More